ಆಹಾರೋದ್ಯಮಿಗಳಿಗೆ ಆಹಾರದ ಗುಣಮಟ್ಟದ ಜತೆ ಶುಚಿತ್ವ ಹಾಗೂ ಪರಿಸರ ನೈರ್ಮಲ್ಯತೆ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ತಾಲೂಕಿನ ಪ್ರತಿಯೊಬ್ಬ ಆಹಾರ ವಹಿವಾಟುದಾರರು ಪ್ರಮಾಣಪತ್ರ ಪಡೆದುಕೊಂಡು ಕಾರ್ಯನಿರ್ವವಹಿಸಬೇಕು.
ಕಾರವಾರ:
ಆಹಾರ ಸುರಕ್ಷತೆ ಮತ್ತು ಔಷಧ (ಆಡಳಿತ ಹಾಗೂ ಆಹಾರ ಸುರಕ್ಷತಾ) ತರಬೇತಿ ಪ್ರಮಾಣಪತ್ರ ಕೇಂದ್ರ ಇವರ ವತಿಯಿಂದ ಹೊನ್ನಾವರದ ಆಹಾರ ವಹಿವಾಟುದಾರರಿಗೆ ಮೊದಲ ಹಂತದ ಒಂದು ದಿನದ ಆಹಾರ ಸುರಕ್ಷತಾ ಮತ್ತು ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು.
ಆಹಾರ ಶಿರಸ್ತೇದಾರ ವೆಂಕಟ್ರಮಣ ಹಳದಿಪುರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುಕೊಳ್ಳುವಂತೆ ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೊನ್ನಾವರ ತಾಲೂಕು ಆರೋಗ್ಯಾಧಿಕಾರಿ ಡಾ. ವೈಶಾಲಿ ಮಾತನಾಡಿ, ಆಹಾರೋದ್ಯಮಿಗಳಿಗೆ ಆಹಾರದ ಗುಣಮಟ್ಟದ ಜತೆ ಶುಚಿತ್ವ ಹಾಗೂ ಪರಿಸರ ನೈರ್ಮಲ್ಯತೆ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ತಾಲೂಕಿನ ಪ್ರತಿಯೊಬ್ಬ ಆಹಾರ ವಹಿವಾಟುದಾರರು ಪ್ರಮಾಣಪತ್ರ ಪಡೆದುಕೊಂಡು ಕಾರ್ಯನಿರ್ವವಹಿಸುವಂತೆ ಸೂಚಿಸಿದರು.
ಉತ್ತರ ಕನ್ನಡ ಜಿಲ್ಲಾ ಸಂಯೋಜಕರಾದ ಮನೋಜ್ ನಾಯ್ಕ ಮಾತನಾಡಿ, ಇನ್ನೂ ಕೆಲವು ದಿನಗಳಲ್ಲಿ ಹೊನ್ನಾವರದಲ್ಲಿ ಇನ್ನೊಂದು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಈ ಕಡ್ಡಾಯ ತರಬೇತಿ ಪ್ರಮಾಣಪತ್ರದ ಪ್ರಯೋಜನವನ್ನು ಎಲ್ಲ ಆಹಾರ ವಹಿವಾಟಿದಾರರು ಪಡೆದುಕೊಳ್ಳಲು ಸೂಚಿಸಿದರು.
ಆಹಾರ ಸುರಕ್ಷತಾ ತರಬೇತಿ ಪ್ರಮಾಣಪತ್ರದ ಕೇಂದ್ರದ ರಾಜ್ಯಾಧ್ಯಕ್ಷ ರಾಘವೇಂದ್ರ ಶೆಟ್ಟಿ ಹಾಗೂ ತರಬೇತಿದಾರರಾದ ಸವಿತಾ ಡಿ.ವಿ. ಅವರು ಆಹಾರ ಸುರಕ್ಷತಾ ಪ್ರಮಾಣಪತ್ರ ಕೇಂದ್ರ ಭಾರತದ ಸರ್ಕಾರ ಇವರು ಎಲ್ಲ ವಾಹಿವಾಟುದಾರರಿಗೆ ವಹಿವಾಟುಗಳ ನಿರ್ವಹಣೆ ಸುರಕ್ಷತಾ ಕ್ರಮ, ಶುಚಿತ್ವ, ಕಲಬೆರಕೆ, ಅನಾವಶ್ಯಕ ಖರ್ಚು, ನಿಯಂತ್ರಣ ಮತ್ತು ಕಡ್ಡಾಯ ಪ್ರಮಾಣಪತ್ರದ ಮಹತ್ವದ ಬಗ್ಗೆ ತರಬೇತಿ ನೀಡಿದರು.
ನಿವೃತ್ತ ಆಹಾರ ಸುರಕ್ಷತಾ ಅಧಿಕಾರಿ ಹಾಗೂ ಸಲಹೆಗಾರ ಅರುಣ ಕಾಶಿಭಟ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.