ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣವನ್ನು ಅಚ್ಚುಕಟ್ಟಾಗಿ, ನೂತನವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅಭಿವೃದ್ಧಿ ದೃಷ್ಟಿಕೋನವನ್ನು ಮುಂದಿಟ್ಟುಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕಾಗುತ್ತದೆ. ಇದೇ ತಿಂಗಳಲ್ಲಿ ಹೊಸೂರು ವೃತ್ತದ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. 2051ಕ್ಕೆ ಶೇ. 50ರಷ್ಟು ನಗರಗಳು ಅಭಿವೃದ್ಧಿ ಹೊಂದಬೇಕು ಎಂಬ ಯೋಜನೆ ಹಾಕಿಕೊಳ್ಳಲಾಗುತ್ತಿದೆ. ನಗರ ಸಾರಿಗೆ, ಕುಡಿಯುವ ನೀರು, ಸ್ಥಳೀಯ ಸಾರಿಗೆ ಹಾಗೂ ವಿದ್ಯುತ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸಮಗ್ರ ಅಭಿವೃದ್ಧಿಗೆ ಒತ್ತು:ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಪಕ್ಷಾತೀತವಾಗಿ ನಾವು ಕೆಲಸ ಮಾಡಬೇಕಿದೆ. ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ₹2 ಸಾವಿರ ಕೋಟಿ ಅನುದಾನವನ್ನು ಒಂದೇ ಬಾರಿ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ. ಹು-ಧಾ ನಗರಗಳು ಸಹ ಅಭಿವೃದ್ಧಿ ಹೊಂದಲಿವೆ ಎಂದರು.
ಬೇರೆ ರಾಜ್ಯಕ್ಕಿಂತ ಕಡಿಮೆ ದರ:
ಅಧ್ಯಕ್ಷತೆ ವಹಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಹು-ಧಾ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪುಸ್ತಕ ಬಿಡುಗಡೆ ಮಾಡಲಾಯಿತು. ಶಾಸಕ ಅರವಿಂದ ಬೆಲ್ಲದ, ವಿಪ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಸಂಸದ ಐ.ಜಿ. ಸನದಿ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಖಾದ್ರಿ, ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ, ಹುಡಾ ಅಧ್ಯಕ್ಷ ಶಾಕೀರ ಸನದಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡು ಆಯುಕ್ತ ಡಾ. ಸಂತೋಷಕುಮಾರ ಬಿರಾದಾರ, ಡಿಸಿಪಿ ಮಹಾನಿಂಗ ನಂದಗಾವಿ ಸೇರಿದಂತೆ ಪಾಲಿಕೆ ಸದಸ್ಯರಿದ್ದರು. ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರುದ್ರೇಶ ಘಾಳಿ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ಶ್ರೀನಿವಾಸ ಪಾಟೀಲ ವಂದಿಸಿದರು.