ಬರವಣಿಗೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಮೆಹಂದಳೆ

KannadaprabhaNewsNetwork |  
Published : Sep 03, 2025, 01:02 AM IST
ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ನೆರವೇರಿತು.

ಮಂಗಳೂರು: ರಾಜ್ಯದಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಅವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂಥವು ಕೇವಲ ಹತ್ತಾರು ಮಾತ್ರ. ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕಾಗಿದೆ ಎಂದು ಸಾಹಿತಿ ಸಂತೋಷ ಕುಮಾರ ಮೆಹಂದಳೆ ಅಭಿಪ್ರಾಯಪಟ್ಟರು.

ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸೂಕ್ತ ಆನುಭವ ಮತ್ತು ಓದಿನ ಹಿನ್ನೆಲೆಯಿಲ್ಲದೆ, ಕೇವಲ ಗ್ರಂಥಾಲಯ ಸರಬರಾಜಿನ ಉದ್ದೇಶದಿಂದ ಮಾತ್ರ ಕೃತಿ ರಚನೆ ಉತ್ತಮವಲ್ಲ ಎಂದು ಅವರು ಸಂದರ್ಭ ಹೇಳಿದರು.

ವಿವಿಧ ಕ್ಷೇತ್ರಗಳ ಪಂಚ ಸಾಧಕರಾದ ಡಾ.ಎಸ್.ಎಂ. ಶಿವಪ್ರಕಾಶ್, ಡಾ. ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ. ಅಸದ್, ರೆಮೊನಾ ಎವೆಟ್ ಪೆರೇರಾ ಮತ್ತು ಗೋಕಾವಿ ಗೆಳೆಯರ ಬಳಗದ ಪರವಾಗಿ ಜಯಾನಂದ ಮಾದರ ಅವರಿಗೆ ಡಾ. ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ರಘು ಇಡ್ಕಿದು ಅಭಿನಂದನಾ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಹೊರ ತಂದಿರುವ ಹಿರಿಯ ಲೇಖಕ ಕಡ್ಕೆ ರಾಮ ಅವಭೃತ ಅವರ ಪರ್ಯಟನಾನುಭವ ಕೃತಿ ಬಿಡುಗಡೆ ನಡೆಯಿತು. ಡಾ ಮೀನಾಕ್ಷಿ ರಾಮಚಂದ್ರ, ಡಾ ಶ್ರೀಧರ್ ಅವಭೃತ ಮತ್ತಿತರರು ಇದ್ದರು. ಪ್ರಕಾಶನದ ವ್ಯವಸ್ಥಾಪಕ ಮುಖ್ಯಸ್ಥ, ಸಾಹಿತಿ ಮಹೇಶ ಆರ್. ನಾಯಕ್ ಸ್ವಾಗತಿಸಿದರು. ಎನ್. ಸುಬ್ರಾಯ ಭಟ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ