ಹೆಣ್ಣು ಮಕ್ಕಳ ಭದ್ರತೆ ಆದ್ಯತೆ ನೀಡಿ

KannadaprabhaNewsNetwork |  
Published : Aug 28, 2024, 12:52 AM IST
ಹೆಣ್ಣು ಮಕ್ಕಳ ಭದ್ರತೆ ಆದ್ಯತೆ ನೀಡಿ : ನಾಗಲಕ್ಷ್ಮೀ ಚೌದರಿ | Kannada Prabha

ಸಾರಾಂಶ

ಹೆಣ್ಣು ಮಕ್ಕಳಿಗೆ ಭದ್ರತೆ ನೀಡುವ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹೆಣ್ಣು ಮಕ್ಕಳಿಗೆ ಭದ್ರತೆ ನೀಡುವ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಹೇಳಿದರು.

ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಮಹಿಳೆಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್ಚಿನ ಗಮನ ನೀಡಬೇಕು. ಸ್ಥಳಿಯ ಪೊಲೀಸ್ ಠಾಣೆಗಳಿಗೆ ಮಹಿಳೆಯರು ಭೇಟಿ ನೀಡಿದ ಸಂದರ್ಭದಲ್ಲಿ ನೊಂದ ಜೀವಗಳಿಗೆ ಸರಿಯಾಗಿ ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಪೊಲೀಸ್ ಠಾಣೆಗಳು ಆಗುವಂತಹ ವ್ಯವಸ್ಥೆಯಾಗಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ ಅಲ್ಪ ಸಂಖ್ಯಾತರ ಮತ್ತು ಖಾಸಗಿ ಮಹಿಳಾ ವಸತಿ ನಿಲಯಯಗಳಲ್ಲಿ ಶಿಷ್ಟಾಚಾರದಂತೆ ಭದ್ರತೆ ಒದಗಿಸುವ ಕೆಲಸ ಕಡ್ಡಾಯವಾಗಿ ಮಾಡಬೇಕು. ಸುರಕ್ಷತೆ ಹಿತದೃಷ್ಟಿಯಿಂದ ಸಿಸಿ ಟಿವಿ ಇರುವುದು ಹಾಗೂ ವಾರ್ಡ್‌ನಗಳು ಮೊಬೈಲ್ ಆಪ್ ಬಳಸುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಮಹಿಳೆಯರ ಸಹಾಯಕ್ಕಾಗಿ ಇರುವ ಸಹಾಯವಾಣಿ ಸಂಖ್ಯೆ ಮತ್ತು ಆ್ಯಪ್‌ಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಉನ್ನತ ಮಟ್ಟದ ಶಿಕ್ಷಣ ಪಡೆಯುತ್ತಿರುವ ಹೆಣ್ಣು ಮಕ್ಕಳಲ್ಲಿ ಕೂಡ ಇವುಗಳ ಕುರಿತು ಮಾಹಿತಿ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು, ವಿಶ್ವವಿದ್ಯಾಲಯ, ಶಾಲಾ ಕಾಲೇಜು ಏನೇ ಇರಲಿ ಅಲ್ಲಿ ಹೆಲ್ಪ್‌ಲೈನ್ ಬಗ್ಗೆ ಜಾಗೃತಿ ಮೂಡಿಸಿ ಸ್ನೇಹಮಯ ವಾತಾವರಣ ಸೃಷ್ಟಿಸಿಸಬೇಕು ಎಂದರು.

ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಇನ್ನೂ ಕಂಡು ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಜಿಪಂ ಅಧಿಕಾರಿಗಳು ಎಲ್ಲಿ ಶೌಚಾಲಯ ನಿರ್ಮಾಣವಾಗಿಲ್ಲವೋ ಅಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಕಾರ್ಯ ಮಾಡಬೇಕು. ಹೆಣ್ಣು ಮಕ್ಕಳು ಕಾಣೆಯಾದಲ್ಲಿ ಟಾಸ್ಕ್ ಫೋರ್ಸ್‌ ರಚಿಸಿ ಕಾರ್ಯನಿರ್ವಹಿಸಿರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಪ್ರಭಾಕರ ಕೆ. ಇದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!