ಶಿಕ್ಷಣ ಜತೆ ಕೌಶಲ್ಯಕ್ಕೂ ಆದ್ಯತೆ ನೀಡಿ

KannadaprabhaNewsNetwork |  
Published : Feb 24, 2026, 02:45 AM IST
ಕ್ಯಾಪ್ಷನ23ಕೆಡಿವಿಜಿ35, 36 ದಾವಣಗೆರೆಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಪಂ ಸಿಇಓ ಗಿತ್ತೆ ಮಾಧವ ವಿಠಲ ರಾವ್ ಇತರರು ಇದ್ದರು. | Kannada Prabha

ಸಾರಾಂಶ

ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

- ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರ ಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಯಲ್ಲಿ 10,404 ಪದವೀಧರರು, 226 ಡಿಪ್ಲೊಮಾ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು ₹33 ಕೋಟಿ, ₹22 ಲಕ್ಷ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ ಎಂದರು.ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ ಎಂದ ಅವರು, ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕವಾಗಿ ಮಾತನಾಡಿದರು. ದೂಡಾ ಅಧ್ಯಕ್ಷ ದ ದಿನೇಶ್ ಕೆ. ಶೆಟ್ಟಿ, ಜಿಪಂ ಯೋಜನಾ ನಿರ್ದೇಶಕಿ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಚಾರ್ಯ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿದ್ದಾರೆ. 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿದ್ದಾರೆ.

- - -

-23ಕೆಡಿವಿಜಿ35, 36.ಜೆಪಿಜಿ:

ದಾವಣಗೆರೆಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯವಸಾಯದಲ್ಲಿ ತಂತ್ರಜ್ಞಾನದ ಅಳವಡಿಕೆ ಅವಶ್ಯ: ಚೇತನಾ ಪಾಟೀಲ
ಸಿಎಂ ಜೊತೆ ಚರ್ಚಿಸಿ ವಿವಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಚಿವ ಡಾ. ಎಂ.ಸಿ. ಸುಧಾಕರ್