ಹೊಸಕೋಟೆ: ಬೇಸಿಗೆ ಪ್ರಾರಂಭವಾಗಿದ್ದು ತಾಲೂಕಿನಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದರು.
ಕುಡಿಯುವ ನೀರು ಸರಬರಾಜು ಜೊತೆಗೆ ಗ್ರಾಪಂ ವ್ಯಾಪ್ತಿಯಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಇದೇ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾರ್ಯಕ್ರಮ, ಯೋಜನೆಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ತಾಪಂ ಇಒ ಡಾ. ನಾರಾಯಣಸ್ವಾಮಿ ಹಾಜರಿದ್ದರು.ಫೋಟೋ: 20 ಹೆಚ್‌ಎಸ್‌ಕೆ 6
ಹೊಸಕೋಟೆ ತಾಪಂ ಕಚೇರಿಯಲ್ಲಿ ಜಿಪಂ ಸಿಇಒ ಡಾ.ಅನುರಾಧ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.