ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡಿ: ತೋಂಟದ ಸಿದ್ಧರಾಮ ಶ್ರೀ

KannadaprabhaNewsNetwork |  
Published : Nov 19, 2026, 02:15 AM IST
ಕಾರ್ಯಕ್ರಮವನ್ನು ತೋಂಟದಾರ್ಯ ಶ್ರೀಗಳು ಉದ್ಘಾಟಿಸಿದರು.  | Kannada Prabha

ಸಾರಾಂಶ

ಸಮಾಜದಲ್ಲಿ ಸಮಾನತೆ, ಸಾಮರಸ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು.

ಪಂಡಿತ ಪುಟ್ಟರಾಜರ ನೂತನ ದೇವಸ್ಥಾನ ಉದ್ಘಾಟನೆ, ಮೂರ್ತಿಗಳ ಪ್ರಾಣಪ್ರತಿಷ್ಠಾಪನೆಕನ್ನಡಪ್ರಭ ವಾರ್ತೆ ಗದಗ

ಸಮಾಜದಲ್ಲಿ ಸಮಾನತೆ, ಸಾಮರಸ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ನಗರದ ಸಂಭಾಪುರ ರಸ್ತೆಯ ಪುಟ್ಟರಾಜ ನಗರ 2ನೇ ಹಂತದ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪಂಡಿತ ಪುಟ್ಟರಾಜರ ದೇವಸ್ಥಾನದ ಉದ್ಘಾಟನೆ, ದುರ್ಗಾದೇವಿ ಹಾಗೂ ನಾಗದೇವರ ಮೂರ್ತಿಗಳ ಪ್ರಾಣಪ್ರತಿಷ್ಠಾಪನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಡೆದ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಬೈರನಟ್ಟಿ, ಶಿರೋಳ ಸಂಸ್ಥಾನಮಠದ ಶಾಂತಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿ, ಪಂಡಿತ ಪುಟ್ಟರಾಜ ಗವಾಯಿಗಳ ಬದುಕು, ಜೀವನಶೈಲಿ, ಸಮಾಜಕ್ಕೆ ಅವರು ನೀಡಿದ ಕೊಡುಗೆ ಹಾಗೂ ಆದರ್ಶಗಳನ್ನು ಸ್ಮರಿಸಿದರು. ಅವರ ಜೀವನದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.

ರಾಜೂರು, ಗದಗದ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ಪ್ರತಿಷ್ಠಾಪನಾ ವಿಧಿವಿಧಾನಗಳನ್ನು ನೆರವೇರಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಜ್ಯೋತ್ಸ್ನಾ ಅಕ್ಕನವರು ಮಾತನಾಡಿ, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಆಧ್ಯಾತ್ಮಿಕ ಚಿಂತನೆ, ಸಂಸ್ಕಾರ ಹಾಗೂ ಸಾಮರಸ್ಯ ಬೆಳೆಸಲು ಪೂರಕವಾಗಿವೆ. ಧಾರ್ಮಿಕ ಆಚರಣೆಗಳ ನೈಜ ಉದ್ದೇಶವನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಉದ್ಘಾಟಿಸಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿ, ಧರ್ಮದ ಆಚರಣೆಗಳು ಕೇವಲ ವೈಯಕ್ತಿಕ ನಂಬಿಕೆಗೆ ಸೀಮಿತವಾಗದೆ ಸಮಾಜದಲ್ಲಿ ಉತ್ತಮ ಬದಲಾವಣೆ ತರುವಂತಿರಬೇಕು. ಧಾರ್ಮಿಕ ಮೌಲ್ಯಗಳು ಸಮಾಜದ ಏಕತೆ ಮತ್ತು ಅಭಿವೃದ್ಧಿಗೆ ಪೂರಕವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುಟ್ಟರಾಜ ನಗರ 2ನೇ ಹಂತದ ಬಡಾವಣೆ ಅಧ್ಯಕ್ಷ ಶಿವಕುಮಾರ ಈ. ಕುಷ್ಟಗಿ ಮಾತನಾಡಿ, ಬಡಾವಣೆಯ ಎಲ್ಲರ ಸಹಕಾರ, ಭಕ್ತರ ನೆರವು ಹಾಗೂ ದಾನಿಗಳ ಕೊಡುಗೆಯಿಂದ ದೇವಸ್ಥಾನ ನಿರ್ಮಾಣ ಕಾರ್ಯ ಸಾಕಾರಗೊಂಡಿದೆ ಎಂದರು. ಮುಖ್ಯ ಅತಿಥಿಗಳಾಗಿ ಅಂದಪ್ಪ ಎಸ್. ಬಂಗಿ, ಆನಂದಗೌಡ ಪಾಟೀಲ, ಅಂಜನೇಯ ಕಟಗಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ದೇವಸ್ಥಾನ ನಿರ್ಮಾಣಕ್ಕೆ ಆರ್ಥಿಕ ನೆರವು ಹಾಗೂ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಭಕ್ತರು ಹಾಗೂ ಬಡಾವಣೆಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬಾಹುಬಲಿ ಜೈನರ ನಿರೂಪಿಸಿದರು. ಎಸ್.ವೈ.ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಸುಕಿನಜಾವದಿಂದಲೇ ಮೂರ್ತಿಗಳ ಪ್ರಾಣಪ್ರತಿಷ್ಠಾಪನೆಯ ಅನೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ