ಕನ್ನಡಪ್ರಭ ವಾರ್ತೆ ತುಮಕೂರು
ಅವರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮೊಬಿಲಿಟಿ ಇಂಡಿಯಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಶಿರಾ ತಾಲೂಕಿನ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳ ಬಗ್ಗೆ ಏರ್ಪಡಿಸಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನ ಮಕ್ಕಳಿಗೆ ಪರಿಕರಗಳನ್ನು ವಿತರಿಸುವುದರ ಮೂಲಕ ಕಾರ‍್ಯಕ್ರಮ ಉದ್ಘಾಟಿಸಿದ ಅವರು ಕುಟುಂಬಗಳಿಗೆ ಮಾರ್ಗದರ್ಶನ ನೀಡುವುದು, ವಿಕಲಚೇತನ ಮಕ್ಕಳನ್ನು ಶೈಕ್ಷಣಿಕ ಮತ್ತು ಸಾಮಾಜಿಕ ಬೆಂಬಲ ವ್ಯವಸ್ಥೆಗಳಿಗೆ ಸಂಪರ್ಕಿಸುವ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಮೂಲಕ, ಪುನರ್ಸಸತಿ ಕಾರ್ಯಕರ್ತರು ಪ್ರತಿ ಮಗುವೂ ಘನತೆಯಿಂದ ಭಾಗವಹಿಸಲು ಅವಕಾಶ ಮಾಡಿಕೊಡಬೇಕೆಂದರು.ಈ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ಈ ವರ್ಷರಾಜ್ಯದ ಎಲ್ಲಾ ಜಿಲ್ಲೆಗಳ ಪುನರ್ವಸತಿ ಕಾರ್ಯಕರ್ತರಿಗೂ ತರಬೇತಿ ನೀಡಲಿದೆ. ಅದರ ಆರಂಭವನ್ನು ಶಿರಾ ತಾಲೂಕಿನಿಂದ ಮಾಡಲಾಗಿದೆ ಎಂದರು.
ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಚಿದಾನಂದ್ ಮಾತನಾಡಿ, ಪುನರ್ವಸತಿ ಕಾರ್ಯಕರ್ತರು ಇಲಾಖೆ ಹಾಗೂ ವಿಕಲಚೇತನರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸೌಲಭ್ಯಗಳು ತಳಮಟ್ಟಕ್ಕೆ ತಲುಪಲು ಗಣನೀಯ ಕೊಡುಗೆ ನೀಡುತ್ತಾರೆ. ಅದರಲ್ಲೂ ಶಿರಾ ತಾಲೂಕಿನಲ್ಲಿ ಒಳ್ಳೆಯ ಸಂಘಟನೆ ಇದ್ದು ಮತ್ತಷ್ಟು ಕ್ರಿಯಾಶೀಲವಾಗಿ ಹಾಗೂ ಸಮುದಾಯವನ್ನು ಒಳಗೊಂಡು ತೊಡಗಿಸಿಕೊಂಡರೆ ಇತರೆ ಜಿಲ್ಲೆಗಳಿಗೆ ಮಾದರಿಯಾಗಲಿದೆ ಎಂದರು.
ಕಾರ‍್ಯಕ್ರಮದಲ್ಲಿ ಶಿರಾ ತಾಲೂಕಿನ ಎಂ.ಆರ್.ಡಬ್ಲು ಚಿತ್ತಯ್ಯ, ಶಿಕ್ಷಣ ಇಲಾಖೆಯ ಸಮನ್ವಯ ಶಿಕ್ಷಣಾಧಿಕಾರಿ ದೊಡ್ಡಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.