ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ತಾಕೀತು ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗ ನಗರದ ಹೃದಯ ಭಾಗದಲ್ಲಿರುವ ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರದ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾತನಾಡಿದರು.
ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿದರು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು ಎಂದು ತಿಳಿಸಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಂಡರು.ಕೆಎಂಇಆರ್‌ಸಿ ಅಡಿಯಲ್ಲಿ ಜಿಲ್ಲಾ ಮತ್ತು ನಗರ ಗ್ರಂಥಾಲಯಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ನಗರ ಕೇಂದ್ರ ಮುಖ್ಯ ಗ್ರಂಥಾಧಿಕಾರಿ ಕೊಳ್ಳಿ ಬಸವರಾಜ್ ಮಾಹಿತಿ ನೀಡಿದರು.
ಗಾಳಿ ಬೆಳಕು ಸರಾಗವಾಗಿರುವಂತೆ ನೋಡಿಕೊಳ್ಳಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗೆ ಸೂಚಿಸಿದರು. ನಂತರ ಶೌಚಾಲಯಕ್ಕೆ ಭೇಟಿ ನೀಡಿ, ವಿಶೇಷ ಚೇತನರು ಶೌಚಾಲಯ ಬಳಸಲು ಮತ್ತು ಹೋಗಿ ಬರಲು ಜಾಗವನ್ನು ಮಾಡಿಕೊಡಿ ಎಂದು ಸಲಹೆ ನೀಡಿದರು.
ತರುವಾಯ ಚಿತ್ರದುರ್ಗ ನಗರದ ಮೆದೇಹಳ್ಳಿ, ತಮಟಕಲ್ಲು ರಸ್ತೆಯಲ್ಲಿರುವ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಪಂ ಸಿಇಒ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಮಾಹಿತಿ ಪಡೆದರು. ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿನಿಯರೊಂದಿಗೆ ಕುಂದು- ಕೊರತೆಗಳ ಮಾಹಿತಿ ಪಡೆದರು.