ಕನ್ನಡಪ್ರಭ ವಾರ್ತೆ ವಿಜಯಪುರ
ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಶೃಂಗಸಭೆ-2026ರಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹಾಗೂ ಸರ್ವಂ ಎಐ ಸಂಸ್ಥೆಯ ಸಹ-ಸಂಸ್ಥಾಪಕ ವಿವೇಕ್ ರಾಘವನ್ ರಾಜ್ಯ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಸಮ್ಮುಖದಲ್ಲಿ ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.
ಈ ವೇಳೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಇಂಥ ಕೇಂದ್ರಗಳು ಉತ್ತರ ಕರ್ನಾಟಕದ ಯುವಜನರಿಗೆ ಕೃತಕ ಬುದ್ಧಿಮತ್ತೆಯ ಹೊಸ ಯುಗದಲ್ಲಿ ಮುಂಚೂಣಿಗೆ ಬರಲು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ನೆರವಾಗಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಎಲ್‌ಡಿಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್‌ಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಸಂಸ್ಥೆ ಬದ್ಧವಾಗಿದೆ. ಈ ಕೇಂದ್ರ ಸ್ಥಾಪಿಸಿ ಬಿ.ಎಲ್.ಡಿ.ಇ ಸಂಸ್ಥೆಯ ನಾನಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ, ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೂ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಹಾಗೂ ಜನರೇಟಿವ್ ಎಐ ಕ್ಷೇತ್ರಗಳಲ್ಲಿ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ. ಸರ್ವಂ ಎಐ ತಜ್ಞರ ಸಹಯೋಗದಲ್ಲಿ ಉದ್ಯಮ ಆಧಾರಿತ ತರಬೇತಿ, ಪ್ರಾಯೋಗಿಕ ಕಲಿಕೆ, ನಾನಾ ಯೋಜನೆಗಳು, ಇಂಟರ್ನ್‌ಶಿಪ್ ಹಾಗೂ ಪ್ರಮಾಣಪತ್ರ ಕೋರ್ಸ್‌ಗಳನ್ನು ಒದಗಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ.ಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಪಿ.ಮಂಜುನಾಥ, ಎಐ ಸಾಮರ್ಥ್ಯ ಕೇಂದ್ರದ ಅಧ್ಯಕ್ಷ ಡಾ.ಆರ್.ಪಿ.ಬಿ.ಕೋಟ್ನಾಳ, ಸದಸ್ಯ ಕಾರ್ಯದರ್ಶಿ ಡಾ.ಪ್ರದೀಪ ಮಲಾಜಿ, ಎಂಜಿನಿಯರಿಂಗ್ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ಸರ್ವಂ ಎಐ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.