ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡಿ, ಮಕ್ಕಳ ಸಂಖ್ಯೆ ಹೆಚ್ಚಿಸಲು ಎಲ್ಲರ ಸಹಕಾರ ಅತಿ ಮುಖ್ಯ, ಸರ್ಕಾರಿ ಶಾಲೆಗಳಿಗೆ ದಾನಿಗಳ ಸಹಕಾರಕ್ಕೆ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಶಾಸಕ ಶ್ರೀನಿವಾಸ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪೋಷಕರು ಹೆಚ್ಚಿನ ಆಸಕ್ತಿ ತೋರಬೇಕು. ದಾನಿಗಳ ನೆರವಿನಿಂದ ಎಲ್ಲಾ ರೀತಿಯ ಸೌಲಭ್ಯಗಳು ಸರ್ಕಾರಿ ಶಾಲೆಯಲ್ಲಿ ಸಿಗುತ್ತಿರುವುದರಿಂದ ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಡಬೇಕು. ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಿಕೊಟ್ಟಿರುವ ಸಿನಾಪ್ಸಿಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ದಾನಿಗಳಿಗೆ ಧನ್ಯವಾದ ತಿಳಿಸಲಾಗುತ್ತದೆ ಎಂದರು.
ಇದೇ ವೇಳೆ ಕಟ್ಟಡ ದಾನಿಗಳಾದ ಚಂದ್ರಶೇಖರ್, ಸುಬ್ರಹ್ಮಣ್ಯಸ್ವಾಮಿ, ಗುತ್ತಿಗೆದಾರ ಸಂದೀಪ್ ಅವರನ್ನು ಸಚಿವರು ಹಾಗೂ ಶಾಲಾ ಆಡಳಿತ ವತಿಯಿಂದ ಸನ್ಮಾನಿಸಲಾಯಿತು.ಗ್ರಾಪಂ ಅಧ್ಯಕ್ಷೆ ವರಲಕ್ಷ್ಮಿ, ಉಪಾಧ್ಯಕ್ಷೆ ಗೌರಮ್ಮ, ಅಕ್ಷರ ದಾಸೋಹದ ಗಂಗಾಧರಯ್ಯ, ಮಾಜಿ ಅಧ್ಯಕ್ಷೆ ದಿವ್ಯ ಮೂರ್ತಿ, ಸದಸ್ಯರಾದ ಶಾಂತ ಮಲ್ಲಯ್ಯ, ನಾಗರಾಜು, ಬ್ಲಾಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಜಿಪಂ ಮಾಜಿ ಸದಸ್ಯ ರಂಗಸ್ವಾಮಿ, ಸಿರಿದಂತೆ ಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.ಪೋಟೋ 1ಮಾಗಡಿ2: ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಚಿಣ್ಣರ ಕಲರವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟಿಸಿದರು, ಶಾಸಕ ಶ್ರೀನಿವಾಸ್ ಇತರರಿದ್ದರು.