ಕಾಲೇಜಿನ ಮೂಲಸೌಕರ್ಯಕ್ಕೆ ಆದ್ಯತೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

KannadaprabhaNewsNetwork |  
Published : Aug 04, 2025, 11:45 PM IST
4ಸಿಎಚ್‌ಎನ್‌55ಚಾಮರಾಜನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನಲ್ಲಿ ಎಂಎಸ್‌ಐಎಲ್ ನಿಗಮದ ಸಿಎಸ್‌ಆರ್ ಫಂಡ್‌ಯೋಜನೆಯಲ್ಲಿ ನಿರ್ಮಿಸಿರುವ ಶುದ್ಧಕುಡಿಯುವ  ನೀರಿನಘಟಕವ ವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದು, ವಿದ್ಯಾರ್ಥಿಗಳು ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದು, ವಿದ್ಯಾರ್ಥಿಗಳು ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಎಂಎಸ್‌ಐಎಲ್ ನಿಗಮದ ಸಿಎಸ್‌ಆರ್ ಫಂಡ್‌ ಯೋಜನೆಯಲ್ಲಿ 5 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, 5 ಲಕ್ಷ ರು. ವೆಚ್ಚದ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ 2021-22 ನೇ ಸಾಲಿನಲ್ಲಿ 15 ಲಕ್ಷರೂ. ರು.ಗಳನ್ನು ಹೆಚ್ಚುವರಿ ಕೊಠಡಿ ನಿರ್ಮಿಸಲು ಬಿಡುಗಡೆ ಮಾಡಲಾಗಿದ್ದು, ಸುಸಜ್ಜಿತವಾದ ಕೊಠಡಿ, ಕುಡಿಯುವ ನೀರು ಹಾಗೂ ಶೌಚಾಲಯ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಈಗಾಗಲೇ ಕಾಲೇಜಿನಲ್ಲಿ ಶುದ್ದ ಘಟಕ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ನೀರಿನ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾಲೇಜಿಗೆ ಮೂಲಭೂತವಾಗಿ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗುವುದು. ಈ ಕಾಲೇಜಿನಲ್ಲಿ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತನ್ನಿ ಅದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಕ್ರಮ ವಹಿಸಲಾಗುವುದು ಎಂದರು.ಚುಡಾ ಅಧ್ಯಕ್ಷ ಮಹಮದ್‌ಅಸ್ಗರ್ ಮುನ್ನ, ನಗರಸಭಾ ಸದಸ್ಯ ಸ್ವಾಮಿ, ಪಿಯುಡಿಡಿ ಪುಟ್ಟಗೌರಮ್ಮ, ನಿವೃತ್ತ ಪ್ರಾಂಶುಪಾಲ ವಿ.ಸೋಮಣ್ಣಪ್ರಾಂಶುಪಾಲ ನಾರಾಯಣ, ಎಂಜಿನಿಯರ್ ಭೀಮ್‌ಸಾಗರ್, ಮಹದೇವಪ್ರಸಾದ್, ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕಲೀಮುಲಾಖಾನ್, ವರ್ಕ್ಇನ್ಸ್‌ಪೆಕ್ಟರ್‌ಬ್ಯಾಡ್‌ಮೂಡ್ಲು ಮರಿಸ್ವಾಮಿ, ಸೋಮಣ್ಣ, ಉಪನ್ಯಾಸಕರಾದ ರಂಗಸ್ವಾಮಿ, ಮಹದೇವಸ್ವಾಮಿ, ಮಧು, ಸವಿತಾ, ಶೀಲಾ, ಸುನಿಲ್ ಸತ್ಯದಾ, ರೋಟರಿ ಮಾಜಿ ಅಧ್ಯಕ್ಷ ಕೆಂಪನಪುರ ಮಹದೇವಸ್ವಾಮಿ, ತಾಪಂ ಮಾಜಿ ಸದಸ್ಯ ಪಿ,ಕುಮಾರ್‌ನಯಕ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ