ದೊಡ್ಡಬಳ್ಳಾಪುರ/ಕುಂದಾಣ: ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಪ್ರಸ್ತುತ ವರ್ಷ ಜಿಲ್ಲಾದ್ಯಂತ ಬರಗಾಲ ಎದುರಾಗಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಇದುವರೆಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಮುಂಜಾಗ್ರತೆಯಿಂದ ಜನರಿಗೆ ಕುಡಿವ ನೀರು ಸಮಸ್ಯೆ ಆಗದಂತೆ ಕ್ರಮ ವಹಿಸಿ, ಜಲಜೀವನ್ ಮಿಷನ್ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಮೋಟಾರ್ ಪಂಪ್ ಅಳವಡಿಸಿ ನೀರು ಪೂರೈಸಿ, ಖಾಸಗಿ ಕೊಳವೆಬಾವಿ ಹಾಗೂ ನೀರಿನ ಟ್ಯಾಂಕರ್‌ಗಳನ್ನು ಅತಿ ಅವಶ್ಯಕತೆ ಇದ್ದಾಗ ಮಾತ್ರ ಬಳಸಿಕೊಳ್ಳಿ. ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣವಾಗದಂತೆ, ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ:ಜಿಲ್ಲೆಯಲ್ಲಿ ಇರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪರಿಶೀಲನೆ ಮಾಡಿ. ಅಗತ್ಯ ಇರುವ ಸ್ಥಳದಲ್ಲಿ ಹೊಸದಾಗಿ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ. ಕೃಷಿ, ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿ, ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ ಅಡಿ ನೋಂದಾಯಿತ ರೈತರಿಗೆ ಪ್ರೋತ್ಸಾಹ ನೀಡಿ. ರೇಷ್ಮೆ ಬೆಳೆಯನ್ನು ವಿಮಾ ಯೋಜನೆಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಸೇವೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಜನರ ಆರೋಗ್ಯ ಹಿತದೃಷ್ಟಿಯಿಂದ ಸಮರ್ಪಕ ಔಷಧಿಗಳು ಎಲ್ಲಾ ಪ್ರಾಥಮಿಕ, ಸಮುದಾಯ, ತಾಲ್ಲೂಕು ಆಸ್ಪತ್ರೆಗೆಳಲ್ಲಿ ಶೇಖರಿಸಿಡಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಜಮೀನು ಸರ್ವೇಗೆ ಕಾಲಮಿತಿ:
ಸಭೆಯಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ಧೀರಜ್ ಮುನಿರಾಜು, ಎಂಎಲ್ಸಿ ಎಸ್.ರವಿ, ಜಿಲ್ಲಾಧಿಕಾರಿ ಡಾ. ಶಿವಶಂಕರ್, ಜಿಪಂ ಸಿಇಒ ಡಾ.ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಎಚ್.ನಟರಾಜ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಎಎಸ್ಪಿ ಪುರುಷೋತ್ತಮ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಜಿಲ್ಲಾ , ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅನ್ನಭಾಗ್ಯ: 2 ಲಕ್ಷ ಫಲಾನುಭವಿಗಳಿಗೆ 11.81 ಕೋಟಿ ರು.