ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಆದ್ಯತೆ

KannadaprabhaNewsNetwork |  
Published : Aug 04, 2026, 01:30 AM IST
ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಆಧ್ಯತೆಯ ಕ್ಷೇತ್ರಗಳು -ಶಾಸಕ ಕೆ.ಷಡಕ್ಷರಿ | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಮತ್ತು ಆರೋಗ್ಯ ಸೌಲಭ್ಯಗಳು ಅತ್ಯಂತ ಪ್ರಮುಖವಾಗಿವೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆ, ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಮತ್ತು ಆರೋಗ್ಯ ಸೌಲಭ್ಯಗಳು ಅತ್ಯಂತ ಪ್ರಮುಖವಾಗಿವೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆ, ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ೨ ಕೋಟಿ ರು.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಆರೋಗ್ಯ ಇಲಾಖೆಯ ಆಯುಷ್ಮಾನ್ ಮಂದಿರ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉತ್ತಮ ರಸ್ತೆ ನಿರ್ಮಾಣದಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರ ಸಾಧ್ಯವಾಗುತ್ತದೆ. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ಅನುಕೂಲವಾಗುವುದರ ಜೊತೆಗೆ ಗ್ರಾಮೀಣ ಆರ್ಥಿಕ ಚಟುವಟಿಕೆಗೂ ವೇಗ ಸಿಗಲಿದೆ ಎಂದರು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸರ್ಕಾರಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆಯ ಆಯುಷ್ಮಾನ್ ಮಂದಿರಗಳು ಗ್ರಾಮೀಣ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲಿವೆ. ಆರೋಗ್ಯ ಸೇವೆಗಾಗಿ ದೂರದ ನಗರಗಳಿಗೆ ತೆರಳುವ ಅಗತ್ಯ ಕಡಿಮೆಯಾಗಲಿದ್ದು, ಜನರಿಗೆ ಗುಣಮಟ್ಟದ ಚಿಕಿತ್ಸೆ ಸ್ಥಳೀಯ ಮಟ್ಟದಲ್ಲೇ ಲಭ್ಯವಾಗಲಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಮತ್ತು ಸುಲಭವಾಗಿ ದೊರೆಯುವ ಆರೋಗ್ಯ ಸೇವೆಯನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಆರೋಗ್ಯ ಕ್ಷೇತ್ರದ ಬಲವರ್ಧನೆಗಾಗಿ ಸರ್ಕಾರ ನಿರಂತರವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಹೊಸದಾಗಿ ನಿರ್ಮಾಣವಾಗುವ ಆಯುಷ್ಮಾನ್ ಮಂದಿರಗಳು ಗ್ರಾಮೀಣ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆ, ತಾಯಿ–ಮಗು ಆರೋಗ್ಯ ಸೇವೆ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸೇವೆಗಳನ್ನು ಒಂದೇ ಸ್ಥಳದಲ್ಲಿ ಪಡೆಯಲು ನೆರವಾಗಲಿವೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶದ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ನಗರಗಳಿಗೆ ತೆರಳಬೇಕಾದ ಪರಿಸ್ಥಿತಿ ಕಡಿಮೆಯಾಗಲಿದ್ದು, ಸ್ಥಳೀಯ ಮಟ್ಟದಲ್ಲೇ ವೈದ್ಯಕೀಯ ಸೇವೆ ದೊರೆಯಲಿದೆ. ಇದರಿಂದ ಸಮಯ ಮತ್ತು ಹಣ ಎರಡೂ ಉಳಿತಾಯವಾಗುವುದರ ಜೊತೆಗೆ ಆರೋಗ್ಯ ಸೇವೆಗಳ ಮೇಲಿನ ಜನರ ವಿಶ್ವಾಸವೂ ಹೆಚ್ಚಲಿದೆ ಎಂದು ಹೇಳಿದರು. ಹಿಂಡಿಸ್ಕೆರೆ ಗ್ರಾಪಂ ವ್ಯಾಪ್ತಿಯ ರಜತಾದ್ರಿಪುರ ಕಾಲೋನಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಈಚನೂರು ಕೊಪ್ಪ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ, ದಸರಿಘಟ್ಟ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ, ರಟ್ಟೆನಹಳ್ಳಿ ಗ್ರಾಮದಿಂದ ಹೂಲಿಹಳ್ಳಿ ಗ್ರಾಮಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಗುರುಗದಹಳ್ಳಿ, ಹೂಲಿಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಮಂದಿರ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್, ಪ್ರಾಥಮಿಕ ಕೃಷಿ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಾಗರಾಜು ಶಿವರ, ತಾಲೂಕು ಆರೋಗ್ಯಾಧಿಕಾರಿ ಡಾ.ಚನ್ನಕೇಶವ, ಗುರುಗದಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೆಲುವನಾರಾಯಣಸ್ವಾಮಿಗೆ ಶ್ರೀಕೃಷ್ಣರಾಜಮುಡಿ ಕಿರೀಟಧಾರಣ ಮಹೋತ್ಸವ
ಸಾಲಬಾಧೆಯಿಂದ ರೈತ ದಂಪತಿ ಆತ್ಮಹತ್ಯೆ: ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ