ಕನ್ನಡಪ್ರಭ ವಾರ್ತೆ ಹುಕ್ಕೇರಿ
ಪಟ್ಟಣದ ಹೊರವಲಯದ ಗಜಬರವಾಡಿ ಬಳಿ ಶನಿವಾರ ನಡೆದ ಲೋಕೋಪಯೋಗಿ ಇಲಾಖೆಯಿಂದ ಸುಮಾರು 3.30 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ, ಆತ್ಮಸ್ಥೈರ್ಯ, ಛಲವಿದ್ದರೆ ಸಾಧನೆಯ ಹಾದಿ ಸುಗಮವಾಗಲಿದೆ. ಶೈಕ್ಷಣಿಕ ಉನ್ನತಿಯಿಂದ ಸುಂದರ ಬದುಕು ರೂಪಗೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳ ಸಂತೋಷದಾಯಕ ಕಲಿಕೆಗೆ ಅಗತ್ಯ ವಾತಾವರಣವಿರಬೇಕು. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆಗೆ ಕ್ಯಾರಗುಡ್ಡ ಬಳಿ 8 ಎಕರೆ ಜಮೀನು ಮಂಜೂರಾಗಿದ್ದು, ಬರುವ ದಿನಗಳಲ್ಲಿ ಈ ನಿವೇಶನದಲ್ಲಿ ಆಧುನಿಕ ಸೌಲಭ್ಯ ಹೊಂದಿದ ಶಾಲಾ-ಕಾಲೇಜು, ವಸತಿ ಶಾಲೆ ನಿರ್ಮಿಸುವ ಸಂಕಲ್ಪ ಹೊಂದಿರುವುದಾಗಿ ಅವರು ಹೇಳಿದರು.ಕಟ್ಟಡದ ಉದ್ಘಾಟಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ಇಂದಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಜೀವನದಲ್ಲಿ ಉನ್ನತ ಗುರಿ ಸಾಧಿಸಲು ಕಠಿಣ ಮತ್ತ ಪರಿಶ್ರಮದಿಂದ ಅಧ್ಯಯನ ಮಾಡಿ ಪಾಲಕ-ಪೋಷಕರ ಕನಸು ನನಸು ಮಾಡಬೇಕು. ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸುತ್ತಿದ್ದು, ಬರುವ ದಿನಗಳಲ್ಲಿ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.