ಮೂಲಭೂತ ಸೌಕರ್ಯಗಳ ಜೊತೆ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕನ್ನಡಪ್ರಭವಾರ್ತೆ ಹೊಸಕೋಟೆ
ಮೂಲಭೂತ ಸೌಕರ್ಯಗಳ ಜೊತೆ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಕೋಟೂರು ಗ್ರಾಮದಲ್ಲಿ ವಿವೇಕ ಶಿಕ್ಷಣ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಗಳು ಶಿಥಿಲಾವಸ್ತೆ ತಲುಪಿದ್ದ ಹಿನ್ನೆಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಿವೇಕ ಶಿಕ್ಷಣ ಯೋಜನೆಯಡಿ ಅನುದಾನವನ್ನು ಒದಗಿಸಿ ಹೊಸ ಹೊಸ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ ಸಿಎಸ್‌ಆರ್ ಅನುದಾನದಲ್ಲಿ ಒಂದು ಕೊಠಡಿ ನಿರ್ಮಾಣಕ್ಕೆ ಅನುದಾನ ದೊರಕಿಸಲಾಗಿದೆ. ಆದ್ದರಿಂದ ಶೀಘ್ರ ಕಾಮಗಾರಿ ಪೂರ್ಣ ಮಾಡುವುದರ ಮೂಲಕ ಗುಣಮಟ್ಟದ ಕೆಲಸ ಮಾಡಿ ಎಂದು ಸೂಚನೆಯನ್ನು ನೀಡಿದರು . ಟಿಎಪಿಸಿಎಂಎಸ್ ಅದ್ಯಕ್ಷ ಮುತ್ಸಂದ್ರ ಬಾಬುರೆಡ್ಡಿ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆ ಜೊತೆಗೆ ದಾನಿಗಳ ನೆರವು ಕೂಡ ಅತ್ಯಗತ್ಯವಾಗಿದೆ. ಆದ್ದರಿಂದ ಸಿಎಸ್‌ಆರ್ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕೊಠಡಿ ನಿರ್ಮಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.ಮಂಜುನಾಥ್, ಹೊಸಹಳ್ಳಿ ಪ್ರಕಾಶ್, ಬಿಎಂಆರ್‌ಡಿಎ ಸದಸ್ಯ ಕೊರಳೂರು ಸುರೇಶ್, ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜು, ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್, ಬಿಎಂಆರ್‌ಡಿಎ ಮಾಜಿ ಅಧ್ಯಕ್ಷ ಟಿಕೆಆರ್ ಕೃಷ್ಣಾರೆಡ್ಡಿ, ಗುತ್ತಿಗೆದಾರ ಬ್ಯಾಟೆಗೌಡ, ಮುಖಂಡರಾದ ಮುತ್ಕುರು ಮುನಿರಾಜು, ಯಡಗೊಂಡನಹಳ್ಳಿ ರಾಧಾಕೃಷ್ಣ, ಮಲ್ಲಸಂದ್ರ ಶೇಷಪ್ಪ, ಸಮೇತನಹಳ್ಳಿ ಸೊಣ್ಣಪ್ಪ, ರಾಮಸ್ವಾಮಿಪಾಳ್ಯ ವಸಂತ್ ಕುಮಾರ್, ವಿನೋದ್ ಕುಮಾರ್, ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.