- ಕೊಂಡಜ್ಜಿಯಲ್ಲಿ ನೂತನ ಸಮುದಾಯ ಭವನ ಉದ್ಘಾಟಿಸಿ ಸಂಸದೆ ಡಾ.ಪ್ರಭಾ ಭರವಸೆ । ದಿ।। ಕೊಂಡಜ್ಜಿ ಬಸಪ್ಪ ಪುಣ್ಯಸ್ಮರಣೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಬಾಲ್ಯದಿಂದಲೂ ಕೊಂಡಜ್ಜಿ ಗ್ರಾಮದೊಂದಿಗೆ ವಿಶೇಷ ಒಡನಾಟ ಹೊಂದಿದ್ದೇನೆ. ಕೊಂಡಜ್ಜಿ ಸೇರಿದಂತೆ ಹರಿಹರ ಕ್ಷೇತ್ರದ ನೀರಾವರಿ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಶನಿವಾರ ನೂತನವಾಗಿ ನಿರ್ಮಿಸಿದ ಸಮುದಾಯ ಭವನ ಉದ್ಘಾಟಿಸಿ, ದಿವಂಗತ ಕೊಂಡಜ್ಜಿ ಬಸಪ್ಪನವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷೇತ್ರದ ಜನಪ್ರತಿನಿಧಿಗಳು, ಎಲ್ಲ ಪಕ್ಷಗಳ ಮುಖಂಡರ ಸಹಕಾರದಲ್ಲಿ ಪಕ್ಷಾತೀತವಾಗಿ ಹರಿಹರ ತಾಲೂಕಿನ ನೀರಾವರಿ ಸಮಸ್ಯೆ ಪರಿಹರಿಸಲು, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬದ್ಧ ಎಂದರು.
ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ, ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೇ, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕಿದೆ. ಹರಿಹರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರದಲ್ಲಿ, ಪಕ್ಷಾತೀತವಾಗಿ ಒಂದಾಗಿ ಕೆಲಸ ಮಾಡೋಣ ಎಂದರು.
ಕೊಂಡಜ್ಜಿಯಲ್ಲಿ ಸುಮಾರು ₹10 ಕೋಟಿ ವೆಚ್ಚದಲ್ಲಿ ವೃತ್ತಿ ರಂಗಭೂಮಿ ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಈಗಾಗಲೇ ₹3 ಕೋಟಿ ಅನುದಾನ ಮಂಜೂರಾಗಿದ್ದು, ₹1 ಕೋಟಿ ಬಿಡುಗಡೆಯಾಗಿದೆ. ಬಾಕಿ ಅನುದಾನವನ್ನು ಹಂತ ಹಂತವಾಗಿ ಒದಗಿಸಲು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಕಾಮಗಾರಿ, ಬಾಕಿ ಕೆಲಸ ಪೂರ್ಣಗೊಳಿಸುವುದಾಗಿ ಅವರು ಹೇಳಿದರು.
ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ, ಹರಿಹರ ಶಾಸಕ ಬಿ.ಪಿ.ಹರೀಶ, ವಿಧಾನ ಪರಿಷತ್ತು ಸದಸ್ಯ ಮೋಹನ ಕೊಂಡಜ್ಜಿ, ಹಿರಿಯರಾದ ಷಣ್ಮುಖಪ್ಪ, ಡಾ.ಗುರುಮೂರ್ತಿ, ವೀರಭದ್ರಪ್ಪ, ಯುವ ಮುಖಂಡ ನಿಖಿಲ್ ಕೊಂಡಜ್ಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ, ಜಲ ಸಾಹಸ ಕ್ರೀಡಾ ತರಬೇತುದಾರ ಪ್ರಭು ಕೊಂಡಜ್ಜಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳು, ಗ್ರಾಮಸ್ಥರು, ಶಿಕ್ಷಕ-ಶಿಕ್ಷಕಿಯರು, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಇದ್ದರು.
(ಕೋಟ್)
- ಡಾ.ಪ್ರಭಾ ಮಲ್ಲಿಕಾರ್ಜುನ, ಸಂಸದೆ.
-14ಕೆಡಿವಿಜಿ1: ಹರಿಹರ ತಾ. ಕೊಂಡಜ್ಜಿಯಲ್ಲಿ ಶನಿವಾರ ನೂತನ ಸಮುದಾಯ ಭವನವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು. ಸಚಿವ ಕೆ.ಎಸ್.ಬಸವಂತಪ್ಪ, ಎಂಎಲ್‌ಸಿ ಮೋಹನ ಕೊಂಡಜ್ಜಿ ಇತರರು ಇದ್ದರು.