ಕೊಪ್ಪಳ ವಿಧಾನಸಭಾ ಕ್ಷೇತ್ರದ ಮಾದಿನೂರು, ನರೇಗಲ್, ಹುಚ್ಚಿರೇಶ್ವರ ಕ್ಯಾಂಪ್, ಯತ್ನಟ್ಟಿ, ಓಜನಹಳ್ಳಿ, ಚಿಲವಾಡಗಿ, ದೇವಳಾಪುರ, ಕಲಿಕೇರಿ, ಹಟ್ಟಿ, ಟನಕಣಕಲ್ ಹಾಗೂ ಹನುಮನಹಳ್ಳಿ ಗ್ರಾಮಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ ನೀಡಿದರು.
ಕೊಪ್ಪಳ: ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ತಿಳಿಸಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಮಾದಿನೂರು, ನರೇಗಲ್, ಹುಚ್ಚಿರೇಶ್ವರ ಕ್ಯಾಂಪ್, ಯತ್ನಟ್ಟಿ, ಓಜನಹಳ್ಳಿ, ಚಿಲವಾಡಗಿ, ದೇವಳಾಪುರ, ಕಲಿಕೇರಿ, ಹಟ್ಟಿ, ಟನಕಣಕಲ್ ಹಾಗೂ ಹನುಮನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳೀಯ ಸಮಸ್ಯೆಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು.
ಉಳಿದ 6 ಕಿ.ಮೀ. ರಸ್ತೆ ಅಭಿವೃದ್ಧಿ: ಕೊಪ್ಪಳ–ಮಾದಿನೂರು ರಸ್ತೆಯಲ್ಲಿ ₹3.50 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಎರಡು ಸೇತುವೆಗಳನ್ನು ಶಾಸಕರು ಪರಿಶೀಲಿಸಿದರು. ಒಟ್ಟು 8 ಕಿ.ಮೀ. ಉದ್ದದ ಈ ರಸ್ತೆಯಲ್ಲಿ ಈಗಾಗಲೇ 2 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಉಳಿದ 6 ಕಿ.ಮೀ. ರಸ್ತೆಯನ್ನು ಇದೇ ಆರ್ಥಿಕ ವರ್ಷದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಮಾದಿನೂರು–ಕಿನ್ನಾಳ ಮಾರ್ಗದಲ್ಲಿ ಹಿರೇಹಳ್ಳಕ್ಕೆ ಹೊಂದಿಕೊಂಡಿರುವ ರಸ್ತೆಯ ಸೇತುವೆ ನಿರ್ಮಾಣಕ್ಕೆ ₹30 ಕೋಟಿ ಅನುದಾನದ ಅಗತ್ಯವಿದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಲೇಬಗೇರಿ–ಹಟ್ಟಿ ಕ್ರಾಸ್ನಿಂದ ಕಿನ್ನಾಳ ವರೆಗಿನ ರಸ್ತೆ ಅಭಿವೃದ್ಧಿಗೂ ಇದೇ ಆರ್ಥಿಕ ವರ್ಷದಲ್ಲಿ ಅನುದಾನ ಒದಗಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಚಿಲವಾಡಗಿ–ಕಲಿಕೇರಿ ರಸ್ತೆ ಕಾಮಗಾರಿ ಶೀಘ್ರ ಆರಂಭ: ಚಿಲವಾಡಗಿ–ಕಲಿಕೇರಿ ರಸ್ತೆ ಅಭಿವೃದ್ಧಿಗೆ ₹3.30 ಕೋಟಿ ಅನುದಾನ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ರಸ್ತೆ ಸಂಪರ್ಕ ಸುಧಾರಣೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು ಎಂದರು.
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜಿಪಂ ಮಾಜಿ ಸದಸ್ಯರಾದ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಕಿ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಾಲಚಂದ್ರನ್, ಬಸವರಾಜ ಇಂದಿರಗಿ, ಯಮನೂರಪ್ಪ ನಾಯಕ್, ಮುಕ್ಕಣ್ಣ ಚಿಲವಾಡಗಿ, ದೇವಪ್ಪ ಓಜನಹಳ್ಳಿ, ವರಪುತ್ರಪ್ಪ ಓಜನಹಳ್ಳಿ, ಶಿವಣ್ಣ ಚರಾರಿ, ಉಡಚಪ್ಪ ಭೋವಿ, ಮೈಲಾರಪ್ಪ ಮಜ್ಜಿಗಿ, ದೇವಪ್ಪ ಹಂದ್ರಾಳ, ಕುಬೇರಪ್ಪ ಹನುಮನಹಳ್ಳಿ, ಮಲ್ಲು ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.