ಸಹಕಾರ ಕ್ಷೇತ್ರದ ಬಲವರ್ಧನೆಗೆ ಆದ್ಯತೆ

KannadaprabhaNewsNetwork |  
Published : Sep 01, 2026, 01:45 AM IST
ಚಿತ್ರ 31ಬಿಡಿಆರ್59 | Kannada Prabha

ಸಾರಾಂಶ

ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರವು ಜಿಲ್ಲಾ ಸಹಕಾರ ಯೂನಿಯನ್‌ನ ಪ್ರಮುಖ ಉದ್ದೇಶಗಳಾಗಿವೆ. ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಭಿಷೇಕ ಆರ್.ಪಾಟೀಲ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೀದರ್

ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರವು ಜಿಲ್ಲಾ ಸಹಕಾರ ಯೂನಿಯನ್‌ನ ಪ್ರಮುಖ ಉದ್ದೇಶಗಳಾಗಿವೆ. ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಭಿಷೇಕ ಆರ್.ಪಾಟೀಲ್ ಹೇಳಿದರು.

ಇಲ್ಲಿನ ಪ್ರತಾಪನಗರದಲ್ಲಿರುವ ಡಿಸಿಸಿ ಬ್ಯಾಂಕ್ ಆರ್‌ಸೆಟಿ ಸಂಸ್ಥೆಯ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಸಹಕಾರ ಯೂನಿಯನ್‌ನ 2025-26ನೇ ಸಾಲಿನ 64ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಲಾಭದಲ್ಲಿರುವ ಸಹಕಾರ ಸಂಘಗಳು ಸಹಕಾರ ಶಿಕ್ಷಣ ನಿಧಿಯನ್ನು ನಿಯಮಿತವಾಗಿ ಪಾವತಿಸಿದರೆ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಮತ್ತಷ್ಟು ಸದೃಢಗೊಳ್ಳಲು ಸಾಧ್ಯವಾಗುತ್ತದೆ. ಸಹಕಾರ ಚಳವಳಿಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲು ಇದರಿಂದ ಅನುಕೂಲ ವಾಗಲಿದೆ ಎಂದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಡಾ.ನೀಲಾಂಬಿಕಾ ಮಾತನಾಡಿ, ಜಿಲ್ಲೆಯ ಎಲ್ಲ ಸಹಕಾರ ಸಂಘಗಳು ಸಕಾಲದಲ್ಲಿ ಸಹಕಾರ ಶಿಕ್ಷಣ ನಿಧಿ ಪಾವತಿಸುವ ಮೂಲಕ ಸಹಕಾರ ಚಳವಳಿಯ ಬಲವರ್ಧನೆಗೆ ಕೈಜೋಡಿ ಸಬೇಕು. ಸಂಘಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಲಾಭದಾಯಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಸದಸ್ಯರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಂಘಗಳ ಒಳಿತು-ಕೆಡಕುಗಳನ್ನು ಅರಿತು, ಸಂಘಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಘಗಳು ಹೆಚ್ಚಿನ ಪ್ರಮಾಣದಲ್ಲಿ ಲಾಭ ಗಳಿಸುವಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಇದರಿಂದ ಸಂಘಗಳ ಅಭಿವೃದ್ಧಿಯೊಂದಿಗೆ ಸದಸ್ಯರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್‌ನ ಉಪಾಧ್ಯಕ್ಷರಾದ ವೈಜಿನಾಥ ಆನಂದೆ, ನಿರ್ದೇಶಕರಾದ ಸೈಫೋದ್ದಿನ್ ಸೋಯಲ್, ಕೀರಣಕುಮಾರ ಕಾಮಶೆಟ್ಟಿ, ಶ್ರೀನಿವಾಸ ರೆಡ್ಡಿ ಪಾಟೀಲ್, ಗುರನಾಥ ಎಖ್ಖೆಳ್ಳಿ, ವಿರೇಶ ತೂಗಾಂವ್, ಗಂಗಾಧರ ಸೋಲಪೂರ್, ದಯಾನಂದ ಗಂಡಪ್ಪ, ಮಲ್ಲಿಕಾರ್ಜುನ್ ನಾಗಮೂರ್ತಿ, ಗುಂಡಪ್ಪಾ ಹಣಮಂತಪ್ಪಾ, ರವಿರಾಜ ಸುಭಾಷ್‌ ಚಂದ್ರ, ಪವನ, ವಿಶ್ವಂಭರಾವ್, ಸೇರಿದಂತೆ ಇತರರು ಇದ್ದರು.

2025-26ನೇ ಸಾಲಿನಲ್ಲಿ ಸಹಕಾರ ಶಿಕ್ಷಣ ನಿಧಿ ಪಾವತಿಸಿದ ಸಹಕಾರ ಸಂಘಗಳ ಅಧ್ಯಕ್ಷರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಸೌಹಾರ್ದ ತರಬೇತಿ ಕೇಂದ್ರ ನೌಬಾದ್‌ನ ನಿರ್ದೇಶಕ ಸುಬ್ರಮಣ್ಯ ಪ್ರಭು ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಆರ್.ಮಲ್ಲಮ್ಮ ವಂದಿಸಿದರು. ಇದರಲ್ಲಿ 200ಕ್ಕೂ ಹೆಚ್ಚು ಸದಸ್ಯರು ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಗಳು ಜೀವನ ಮೌಲ್ಯಗಳನ್ನು ಕಲಿಸುವ ಪಾಠಶಾಲೆ
ಅಣ್ಣಾಭಾವು ಸಾಠೆ ಸಾಹಿತ್ಯವು ಸಾಮಾಜಿಕ ನ್ಯಾಯದ ಹಾದಿ: ಸೂರ್ಯಕಾಂತ