ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶುಕ್ರವಾರ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಅಧಿಕಾರಿಗಳು ಕಚೇರಿಗಳಲ್ಲೇ ಕುಳಿತು ಕೆಲಸ ಮಾಡದೆ, ಕ್ಷೇತ್ರಕ್ಕೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಎಲ್ಲ ಅಧಿಕಾರಿಗಳು ಫೀಲ್ಡ್ ಗೆ ತೆರಳಿ ಪರಿಸ್ಥಿತಿ ಪರಿಶೀಲಿಸಬೇಕು ಎಂದು ಸೂಚಿಸಿದರು.ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ರೈತರು ತಮ್ಮ ಸಮಸ್ಯೆಗಳನ್ನು ಶಾಸಕರ ಮೂಲಕ ಸರ್ಕಾರಕ್ಕೆ ತಲುಪಿಸಬೇಕು ಎಂದು ಮನವಿ ಮಾಡಿದರು. ಯುಕೆಪಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ಕಾರ್ಯ ಮುಂದುವರಿಯಲಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆಯೂ ಮರುಪರಿಶೀಲನೆ ನಡೆಯುತ್ತಿದೆ ಎಂದರು.
ಈ ವೇಳೆ ಸಚಿವ ವಿಜಯಾನಂದ ಕಾಶಪ್ಪನವರ ಸೇರಿದಂತೆ ಜಿಲ್ಲೆಯ ಶಾಸಕರು ಬರಪರಿಹಾರಕ್ಕೆ ಒತ್ತಾಯಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಕೆನಾಲ್ ಗಳ ಕೊನೆಯ ಹಂತಕ್ಕೆ ನೀರು ತಲುಪುತ್ತಿಲ್ಲ. ಬೆಳೆ ಹಸಿರಾಗಿದ್ದರೂ ಫಸಲು ಬರುವ ಪರಿಸ್ಥಿತಿ ಇಲ್ಲ ಎಂದು ತಿಮ್ಮಾಪುರ ಅವರು ಸಮಸ್ಯೆ ವಿವರಿಸಿದರು. ವರ್ಷಕ್ಕೆ 18 ಸಾವಿರ ಕೋಟಿ ನೀಡಬೇಕು ಎಂಬ ಬೇಡಿಕೆಯನ್ನೂ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅವರು ಮುಂದಿಟ್ಟರು.ಪ್ರಜಾಸೇವಾ ಆಂದೋಲನ ಇಂದಿನಿಂದ ಆರಂಭವಾಗಲಿದ್ದು, ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ, ರೈತರನ್ನು ಗೌರವದಿಂದ ಕಾಣಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯ ಪೂರ್ವದಲ್ಲಿ ರೈತರ, ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರ ಸಂಘ ಸೇರಿದಂತೆ ಒಟ್ಟು 18 ಅಹವಾಲುಗಳ ಅರ್ಜಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
-ಡಿ.ಕೆ.ಶಿವಕುಮಾರ, ಮುಖ್ಯಮಂತ್ರಿ