ಗಡಿ ಗ್ರಾಮಗಳ ಅಭಿವೃದ್ಧಿ, ಗ್ರಾಮೀಣ ಪ್ರದೇಶದ ಮೂಲ ಸೌಲಭ್ಯಗಳಿಗೂ ಆದ್ಯತೆ

KannadaprabhaNewsNetwork |  
Published : Nov 07, 2026, 02:00 AM IST
ಪೋಟೋ 9 : ಬೂದಿಹಾಲ್ ಗ್ರಾಪಂ ವ್ಯಾಪ್ತಿಯ ವಜ್ರಗಟ್ಟೆಪಾಳ್ಯ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಗೆ ಶಾಸಕ ಎನ್.ಶ್ರೀನಿವಾಸ್ ಹಾಗೂ ಮುಖಂಡರು ಚಾಲನೆ ನೀಡಿದರು | Kannada Prabha

ಸಾರಾಂಶ

ದಾಬಸ್‍ಪೇಟೆ: ಗಡಿ ಗ್ರಾಮಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು

ದಾಬಸ್‍ಪೇಟೆ: ಗಡಿ ಗ್ರಾಮಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಬೂದಿಹಾಲ್ ಗ್ರಾಪಂ ವ್ಯಾಪ್ತಿಯ ವಜ್ರಗಟ್ಟೆಪಾಳ್ಯ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಸಕನನ್ನಾಗಿ ಮಾಡಿ ಅಧಿಕಾರ ನೀಡಿದ್ದಾರೆ. ಅಧಿಕಾರವನ್ನು ದುರುಪಯೋಗಿಸದೆ ಕ್ಷೇತ್ರದ ಮನೆಯ ಮಗನಾಗಿ ನಿಮ್ಮ ಸೇವೆ ಮಾಡುತ್ತೇನೆ. ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಶಾಶ್ವತ ಯೋಜನೆಗಳನ್ನು ತಂದಿರುವ ತೃಪ್ತಿಯಿದೆ. ಇನ್ನೂ ಹಲ ಸಮಸ್ಯೆಗಳಿಗೆ ಇನ್ನೆರಡು ವರ್ಷಗಳಲ್ಲಿ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ತಾಲೂಕಾದ್ಯಂತ ರಂಗೋಲಿ ಸ್ಪರ್ಧೆ ಆಯೋಜಿಸಿ ಮಹಿಳೆಯರಲ್ಲಿರುವ ಪ್ರತಿಭೆ ಗುರುತಿಸುವುದಲ್ಲದೆ ಅವರನ್ನು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸ ಮಾಡುತ್ತಿದ್ದೇನೆ. ಇದರಲ್ಲೂ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಆಯಾ ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳನ್ನು ಗ್ರಾಮಸ್ಥರು ನಿಗಾ ವಹಿಸಬೇಕು. ಲೋಪಗಳು ಕಂಡುಬಂದಲ್ಲಿ ಕೂಡಲೇ ಅಧಿಕಾರಿಗಳು ಇಲ್ಲವೇ ನನ್ನ ಗಮನಕ್ಕೆ ತರಬೇಕು. ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಕೆ.ನಾಗರಾಜು, ನಗರಸಭೆ ಅಧ್ಯಕ್ಷ ಎನ್.ಗಣೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ನಾಗರಾಜು, ಬಮೂಲ್ ನಾಮನಿರ್ದೇಶಕ ಮುನಿರಾಮು, ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ ಸಿ.ಎಂ.ಗೌಡ, ಕಾಚನಹಳ್ಳಿ ಮನು ಮತ್ತಿತರ ಮುಖಂಡರುಮ ಗ್ರಾಮಸ್ಥರು ಉಪಸ್ಥಿತರಿದ್ದರು.

ಪೋಟೋ 9 :

ಬೂದಿಹಾಲ್ ಗ್ರಾಪಂ ವ್ಯಾಪ್ತಿಯ ವಜ್ರಗಟ್ಟೆಪಾಳ್ಯ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಗೆ ಶಾಸಕ ಎನ್.ಶ್ರೀನಿವಾಸ್ ಹಾಗೂ ಮುಖಂಡರು ಚಾಲನೆ ನೀಡಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ