ಕೆ.ಎಂ.ದೊಡ್ಡಿ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Oct 05, 2026, 01:45 AM IST
4ಕೆಎಂಎನ್ ಡಿ18 | Kannada Prabha

ಸಾರಾಂಶ

ಈ ಹಿಂದೆ ಮೆಳ್ಳಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದರು. ಈ ಸ್ಪಂದಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮನ್ಮುಲ್‌ನಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಮೆಳ್ಳಹಳ್ಳಿ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗಲಿದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕೆ.ಎಂ.ದೊಡ್ಡಿ ಪಟ್ಟಣವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮೆಳ್ಳಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಮೆಳ್ಳಹಳ್ಳಿ 5ನೇ ನಂಬರ್ ಗರೀಬಿ ಕಾಲೋನಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 25 ಲಕ್ಷ ರು. ವೆಚ್ಚದಲ್ಲಿ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಮತ್ತು ಮನ್ಮುಲ್‌ನಿಂದ ನಿರ್ಮಿಸಿತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದರು. ಈ ಸ್ಪಂದಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮನ್ಮುಲ್‌ನಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಮೆಳ್ಳಹಳ್ಳಿ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದರು.

ಮದ್ದೂರು ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರ್ಕಾರದಿಂದ 2 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಾಗುತ್ತಿದೆ ಎಂದರು.

ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿರುವ ದೇವಸ್ಥಾನ ನಿರ್ಮಾಣಕ್ಕೂ ಶೀಘ್ರದಲ್ಲೇ ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಗ್ರಾಮದ ಪೌರ ಕಾರ್ಮಿಕರು ವಸತಿಗೃಹ ನಿರ್ಮಿಸಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಗ್ರಾಮದ ಸರ್ಕಾರಿ ಜಾಗವನ್ನು ಗುರುತಿಸಿ ಪೌರ ಕಾರ್ಮಿಕರ ವಸತಿಗೃಹ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಪಿಡಿಒ ಅವರಿಗೆ ಸೂಚಿಸಿದರು.

ಬಳಿಕ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬವೊಂದಕ್ಕೆ ಧನಸಹಾಯ ನೀಡಲಾಯಿತು. ಈ ವೇಳೆ ಮನ್ಮುಲ್ ಅಧ್ಯಕ್ಷ ಹರೀಶ್ ಬಾಬು, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಟಿಎಪಿಸಿಎಂಎಸ್ ನಿರ್ದೇಶಕ ರಾಘು, ಮನ್ಮುಲ್ ಉಪವ್ಯವಸ್ಥಾಪಕ ಮಂಜೇಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಮುಖಂಡರಾದ ಕೆ. ಕಬ್ಬಾಳಯ್ಯ, ಗ್ರಾಪಂ ಮಾಜಿ ಸದಸ್ಯರಾದ ಪುಟ್ಟರಾಮು, ಕೆ.ವಿ.ಶ್ರೀನಿವಾಸ್, ಕೆ.ಟಿ.ಶ್ರೀನಿವಾಸ್, ವೆಂಕಟೇಶ್, ಮಹದೇವ, ಸಿದ್ದರಾಜು, ಶಂಕರ, ರಂಗೇಗೌಡ, ಶಿವಮ್ಮ, ಮಂಜುಳ, ಗಿರಿಜಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡ ರೈತರಿಗೆ ಕಾನೂನು ಬದ್ಧವಾಗಿಯೇ ಬಗರ್‌ಹುಕುಂ ಸಾಗುವಳಿ ಜಮೀನು ಮಂಜೂರು
ಮಂಡ್ಯ: ಗುರುದೇವ ಅಕಾಡೆಮಿಯ ಗುರು ದೇವೋತ್ಸವಕ್ಕೆ ತೆರೆ