ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿಗೆ ಆದ್ಯತೆ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

KannadaprabhaNewsNetwork |  
Published : Sep 29, 2026, 02:00 AM IST
ಕ್ಯಾಪ್ಷನ28ಕೆಡಿವಿಜಿ39 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಚರ್ ನೇಮಕಾತಿ ನಿಷೇಧ, ಪುನರ್ ವಸತಿ ಕಾಯ್ದೆ  ಅನುಷ್ಠಾನ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಪಂ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳು ಮತ್ತು ಪೌರಕಾರ್ಮಿಕರ ಹಿತರಕ್ಷಣೆ ಹಾಗೂ ಕ್ಷೇಮಾಭಿವೃದ್ಧಿಗೆ ಜಿಲ್ಲಾಡಳಿತ ಬದ್ಧವಾಗಿದ್ದು, ಅವರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ತಕ್ಷಣವೇ ತಲುಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಪಂ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳು ಮತ್ತು ಪೌರಕಾರ್ಮಿಕರ ಹಿತರಕ್ಷಣೆ ಹಾಗೂ ಕ್ಷೇಮಾಭಿವೃದ್ಧಿಗೆ ಜಿಲ್ಲಾಡಳಿತ ಬದ್ಧವಾಗಿದ್ದು, ಅವರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ತಕ್ಷಣವೇ ತಲುಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಚರ್ ನೇಮಕಾತಿ ನಿಷೇಧ ಮತ್ತು ಪುನರ್ ವಸತಿ ಕಾಯ್ದೆ -2013 ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೈರ್ಮಲ್ಯ ಕೆಲಸದಲ್ಲಿ ತೊಡಗಿರುವ ಪ್ರತಿಯೊಬ್ಬ ಸಫಾಯಿ ಕರ್ಮಚಾರಿಗಳ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಇವರಿಗೆ ಕಡ್ಡಾಯವಾಗಿ ಹೆಪಟೈಟಿಸ್ ಬಿ ಹಾಗೂ ಹರ್ಪಿಸ್ ಲಸಿಕೆಗಳನ್ನು ಉಚಿತವಾಗಿ ನೀಡಲು ಮತ್ತು ಸಂಪೂರ್ಣ ರಕ್ತ ಪರೀಕ್ಷೆ ಸೇರಿದಂತೆ ಸಮಗ್ರ ಆರೋಗ್ಯ ತಪಾಸಣೆ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಸೇವೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಅಗತ್ಯವಿರುವ ಎಲ್ಲಾ ರೀತಿಯ ರಕ್ಷಣಾತ್ಮಕ/ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಹಿಂದೆ ಗುರುತಿನ ಚೀಟಿ ಪಡೆಯದೆ ವಂಚಿತರಾದ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪಟ್ಟಿಯಲ್ಲಿ ಹೆಸರು ನಮೂದಾಗಿರುವ ಅರ್ಹ ಕಾರ್ಮಿಕರ ಪಟ್ಟಿಯನ್ನು ಮರು-ಪರಿಶೀಲಿಸಿ, ತಕ್ಷಣವೇ ಅಧಿಕೃತ ಗುರುತಿನ ಚೀಟಿಗಳನ್ನು ಹಂಚಿಕೆ ಮಾಡಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಸಫಾಯಿ ಕರ್ಮಚಾರಿಗಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಸ್ಕಾಲರ್ ಶಿಪ್‌ಗೆ ಅರ್ಜಿ ಸಲ್ಲಿಸುವಾಗ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಐ.ಎ.ಎಸ್ ಹಾಗೂ ಐ.ಪಿ.ಎಸ್ ನಂತಹ ಉನ್ನತ ಹಂತದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡುವ ಸೌಲಭ್ಯ ಹಾಗೂ ಉನ್ನತ ವ್ಯಾಸಂಗಕ್ಕಾಗಿ ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ವಿದೇಶಕ್ಕೆ ತೆರಳುವ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸುವ ಯೋಜನೆಗಳು ಲಭ್ಯವಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಈ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಕೈಪಿಡಿಯನ್ನು ತಯಾರಿಸಿ ಪ್ರತಿಯೊಂದು ಕುಟುಂಬಕ್ಕೂ ವಿತರಿಸುವ ಮೂಲಕ ಜಾಗೃತಿ ಮೂಡಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗೇಶ್, ಮಹಾನಗರ ಪಾಲಿಕೆ ಆಯುಕ್ತ ಡಾ.ಎನ್.ಮಹಾಂತೇಶ, ಜಿಪಂ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಡಿಎಚ್‌ಒ ಡಾ.ಕೃಷ್ಣ ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಖಾನೆ ವಿಸ್ತರಣೆ, ಮಾಲಿನ್ಯ ವಿರೋಧಿಸಿ 48 ಗಂಟೆ ಕೊಪ್ಪಳ ಬಂದ್ ಕರೆ
ಸುರಕ್ಷಿತ ಗರ್ಭಪಾತ, ಶ್ರವಣದೋಷ ತಡೆಗೆ ಅರಿವು ಅಗತ್ಯ: ಡಾ. ರಾಜೇಶ್