ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ: ಶಾಸಕ ಸಿ.ಪುಟ್ಟರಂಗಶೆಟ್ಟಿ ಭರವಸೆ

KannadaprabhaNewsNetwork |  
Published : Nov 04, 2025, 12:15 AM IST
ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಆದ್ಯತೆ | Kannada Prabha

ಸಾರಾಂಶ

ವಿವಿಧ ಯೋಜನೆಗಳಡಿ ಅನುದಾನ ಮಂಜೂರು ಮಾಡಿಸಿ, ಸಿಸಿ ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು.

ಚಾಮರಾಜನಗರ: ಗ್ರಾಮೀಣ ರಸ್ತೆಗಳು ಮತ್ತು ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಗ್ರಾಮೀಣ ಅಭಿವೃದ್ಧಿಯ ಪ್ರತೀಕವಾಗಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ೨ ಕೋಟಿ ರು. ವೆಚ್ಚದಲ್ಲಿ ತಾಲೂಕಿನ ಡೊಳ್ಳಿಪುರ ಗ್ರಾಮದಿಂದ ಬ್ಯಾಡಮೂಡ್ಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ನಾಗರಿಕರ ಬೇಡಿಕೆಗೆ ಪೂರಕವಾಗುವಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿವಿಧ ಯೋಜನೆಗಳಡಿ ಅನುದಾನ ಮಂಜೂರು ಮಾಡಿಸಿ, ಸಿಸಿ ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಗುಣಮಟ್ಟವನ್ನು ಕಾಯ್ಧುಕೊಳ್ಳುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು. ಗ್ರಾಪಂ ಸದಸ್ಯರಾದ ಭಾಗ್ಯಮ್ಮ, ಮಂಜುನಾಥ್, ಮಾಜಿ ಗ್ರಾಪಂ ಅಧ್ಯಕ್ಷ ಬ್ಯಾಡಮೂಡ್ಲು ನಾಗರಾಜು, ಕೃಷ್ಣಶೆಟ್ಟಿ ಸೇರಿ ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ