₹9.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿದ ಶಾಸಕಕನ್ನಡಪ್ರಭ ವಾರ್ತೆ ಕೊಪ್ಪಳ
ತಾಲೂಕಿನ ಮತ್ತೂರು, ಹನಕುಂಟಿ, ತಿಗರಿ, ಬೆಟಗೇರಿ, ಮೋರನಾಳ, ಬೈರಾಪುರ, ಬೋಚನಹಳ್ಳಿ, ಹಲವಾಗಲಿ ಹಾಗೂ ನಿಲೋಗಿಪುರ ಗ್ರಾಮಗಳಲ್ಲಿ ಅಂದಾಜು ಮೊತ್ತ ₹9.50 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ. ಅಳವಂಡಿ ಹೋಬಳಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇನ್ನುಳಿದ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿ ರಸ್ತೆ ಅಭಿವೃದ್ಧಿ ಪಡಿಸುತ್ತೇವೆ ಎಂದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಅಡಿಗಲ್ಲು:ತಾಲೂಕಿನ ಮೋರನಾಳ ಹಾಗೂ ಬೈರಾಪುರ ಗ್ರಾಮದಲ್ಲಿ ತಲಾ ಗ್ರಾಮಕ್ಕೆ ₹20 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು.
ತಾಲೂಕಿನ ಬೋಚನಹಳ್ಳಿ ಗ್ರಾಮದಿಂದ ಹನಕುಂಟಿ ಗ್ರಾಮದ ರಾಜ್ಯ ಹೆದ್ದಾರಿ ರಸ್ತೆಯ 2.5 ಕಿಮೀ ರಸ್ತೆ ಅಭಿವೃದ್ಧಿಯ ₹2.50 ಕೋಟಿ ಕಾಮಗಾರಿ ಹಾಗೂ ಬಿಸರಲ್ಲಿಯಿಂದ ಬೆಟಗೇರಿ ರಸ್ತೆ ಅಭಿವೃದ್ಧಿಯ ₹2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು.