ರೈತರು ಸಂಚರಿಸುವ ರಸ್ತೆ ಅಭಿವೃದ್ಧಿಗೆ ಆದ್ಯತೆ

KannadaprabhaNewsNetwork |  
Published : Jul 11, 2026, 01:15 AM IST
ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಸಿಸಿ ರಸ್ತೆ. ಚರಂಡಿ ಕಾಮಗಾರಿಗೆ ಶಾಸಕ ಎಂ.ಆರ್‌. ಪಾಟೀಲ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಸಂಶಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಬ್ರಿಜ್-ಕಂ-ಬ್ಯಾರೇಜ್ ಅಭಿವೃದ್ಧಿಪಡಿಸಲಾಗಿದ್ದು, ರೈತರ ಅನುಕೂಲಕ್ಕಾಗಿ ಇನ್ನೂ ಹಲವು ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಂ.ಆರ್‌. ಪಾಟೀಲ ಹೇಳಿದರು.

ಕುಂದಗೋಳ:

ಗ್ರಾಮೀಣ ಭಾಗದಲ್ಲಿ ರೈತರು ಸಂಚರಿಸುವ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಹಂತ-ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.

ತಾಲೂಕಿನ ಸಂಶಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹18.50 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಸವರಾಜ ಕಲ್ಲೂರ ನಿವಾಸದಿಂದ ಅಶೋಕ್ ಮೇದಾರ ನಿವಾಸದ ವರೆಗಿನ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸಂಶಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಬ್ರಿಜ್-ಕಂ-ಬ್ಯಾರೇಜ್ ಅಭಿವೃದ್ಧಿಪಡಿಸಲಾಗಿದ್ದು, ರೈತರ ಅನುಕೂಲಕ್ಕಾಗಿ ಇನ್ನೂ ಹಲವು ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಜನರ ಅಭಿವೃದ್ಧಿ ಬೇಡಿಕೆಗಳು ಹೆಚ್ಚಾಗಿದ್ದು, ಸರ್ಕಾರದಲ್ಲಿ ಅನುದಾನದ ಕೊರತೆ ಇದ್ದರೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹಕಾರದಿಂದ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಯೋಜನೆ ತರಲಾಗುತ್ತಿದೆ. ಸಿಎಸ್ಆರ್ ನಿಧಿಯಿಂದ ₹ 56 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.

ಬಿಜೆಪಿ ಮುಖಂಡ ಡಿ.ವೈ. ಲಕ್ಕನಗೌಡ, ಜಿಪಂ ಮಾಜಿ ಸದಸ್ಯ ಎನ್.ಎನ್. ಪಾಟೀಲ್, ಮುಖಂಡರಾದ ಪ್ರಕಾಶ ಕುಬಿಹಾಳ, ಗುರುಸಿದ್ದಪ್ಪ ನಾಯ್ಕರ, ಸುರೇಶ್ ಮಾಕಪನವರ, ಬಸವರಾಜ ಕಲ್ಲೂರ, ಪ್ರಕಾಶಗೌಡ ಪಾಟೀಲ್, ಪಿಡಿಒ ಪಾಂಡುರಂಗ ಹಟ್ಟಿ ಗುತ್ತಿಗೆದಾರ ವಿನಾಯಕ ಕಲ್ಲಣ್ಣನವರ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಭಾಷಿ ಬದ್ಕ್ ವಿಶ್ವಪ್ರಸಿದ್ಧಿ: ಜ್ಯೋತಿ ಉದಯಕುಮಾರ್
ಅಡಕೆ ಸಾಗಾಟಕ್ಕೆ ಅಡ್ಡಿ : ಮಹಾ ಸಿಎಂ ಜೊತೆ ಸಭೆ