ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ನಾಗೇಗೌಡನದೊಡ್ಡಿ ಗ್ರಾಪಂ ಆವರಣದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ರಾಷ್ಟ್ರೀಯ ಜೀವನೋಪಾಯ ಸಂವರ್ಧನಾ ಸಂಸ್ಥೆ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿ, ಗ್ರಾಮೀಣ ಪ್ರದೇಶದ ಬಡಜನರ ಅಭಿವೃದ್ಧಿಗೆ ಸರ್ಕಾರದ ಸಹಯೋಗದೊಂದಿಗೆ ಮಹಿಳಾ ಗುಂಪುಗಳನ್ನು ರಚಿಸಿ ಆರ್ಥಿಕ, ಸಾಮಾಜಿಕವಾಗಿ ನೆರವಾಗಲು ಮುಂದಾಗಿದೆ. ಅಲ್ಲದೇ ನರೇಗಾ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು.
ಗ್ರಾಮೀಣ ಭಾಗದ ದುಡಿಯುವ ಮಹಿಳೆಯರಿಗಾಗಿ ಸ್ವ-ಸಹಾಯ ಗುಂಪುಗಳಲ್ಲಿ ಸಾಲ ರೂಪದಲ್ಲಿ ಬಂಡವಾಳ ನೀಡಿ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಅವರನ್ನು ಆರ್ಥಿಕತೆವಾಗಿ ಸದೃಢಗೊಳಿಸಿ ಸ್ವಾವಲಂಬನೆ ಸಾಧಿಸುವಂತೆ ಸರ್ಕಾರ ಮಾಡುತ್ತಿದೆ ಎಂದರು.ಸರ್ಕಾರ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರಿಗೆ ವೃತ್ತಿ ತರಬೇತಿ ಜೊತೆಗೆ ಆರ್ಥಿಕ ನೆರವು ಸಹ ನೀಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಪಂಚಾಯತ್ ಹಾಗೂ ಸಂಘಗಳ ಅಭಿವೃದ್ಧಿ ಬಗ್ಗೆ ಚರ್ಚೆಗಳನ್ನು ನಡೆಸಲು ಇಂಥ ಕಟ್ಟಡಗಳ ನಿರ್ಮಾಣದ ಮೂಲಕ ಸಹಾಯಕವಾಗುತ್ತದೆ ಎಂದರು.