ಶೈಕ್ಷಣಿಕ ಕ್ಷೇತ್ರಕ್ಕೆ ಆದ್ಯತೆ: ಶಾಸಕ ಎಂ.ಟಿ.ಕೃಷ್ಣಪ್ಪ

KannadaprabhaNewsNetwork |  
Published : Mar 07, 2026, 12:15 AM IST
6 ಟಿವಿಕೆ 3 - ತುರುವೇಕೆರೆ ತಾಲೂಕಿನ ಹಡವನಹಳ್ಳಿ ಜನತಾ ಕಾಲೋನಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡದ ಕಾಮಾಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ತಾಲೂಕಿನ ಹಡವಹಳ್ಳಿ ಜನತಾ ಕಾಲೋನಿ ಗೇಟ್ ಬಳಿ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ನಿರ್ಮಾಣಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ತಾಲೂಕಿನ ಹಡವಹಳ್ಳಿ ಜನತಾ ಕಾಲೋನಿ ಗೇಟ್ ಬಳಿ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ನಿರ್ಮಾಣಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಎಂ.ಟಿ.ಕೃಷ್ಣಪ್ಪ, ತಾವು 2017 ರಲ್ಲೇ ಅಂಬೇಡ್ಕರ್ ವಸತಿ ಶಾಲೆ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಿತ್ತು. ಈಗ ಸುಮಾರು 22 ಕೋಟಿ ವೆಚ್ಚದಲ್ಲಿ, ಎಂಟು ಎಕರೆ ವಿಸ್ತೀರ್ಣದಲ್ಲಿ ಬೃಹತ್ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು. ತಾವು ಮಕ್ಕಳ ಉನ್ನತ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದೇನೆ. ಐದಾರು ವಸತಿ ಶಾಲೆಗಳು. ಪಾಲಿಟೆಕ್ನಿಕ್, ಐಟಿಐ, ಪ್ರಥಮ ದರ್ಜೆ ಕಾಲೇಜು, ಹೈಸ್ಕೂಲ್ ಸೇರಿದಂತೆ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು ತಂದಿದ್ದೇನೆ. ಇದು ನನಗೆ ಸಮಾಧಾನ ತಂದಿದೆ ಎಂದರು.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಕಾನೂನು ಕಾಲೇಜು, ಕೌಶಲ್ಯ ತರಬೇತಿ ಶಾಲೆ ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಗಳನ್ನು ಅನುಮೋದಿಸಿಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೇಳಿದರೆ, ಕಾಂಗ್ರೆಸ್ ಗೆ ಬಾ ಅಂತಾರೆ. ಅವರಲ್ಲೇ ಜನ ತುಂಬಿ ತುಳುಕುತ್ತಿದ್ದಾರೆ. ಇನ್ನು ನಾನು ಕಾಂಗ್ರೆಸ್ ಗೆ ಹೋಗಿ ಏನು ಮಾಡಲಿ. ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ನಾನು ಕಟ್ಟಾ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಅನುಯಾಯಿ. ಅವರ ಹೋರಾಟದ ಮಜಲು ನನ್ನಲ್ಲೂ ಇದೆ. ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಈಗಿನ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಗೀಳಿಗೆ ಬಿದ್ದಿದೆ. ಗ್ಯಾರಂಟಿ ಬೇಡ ಎಂದರೆ ಜನರು ನಮ್ಮನ್ನು ಬೈಕೋತಾರೆ. ಇನ್ನು ಗ್ಯಾರಂಟಿಗಾಗಿ ಬೊಕ್ಕಸದ ಹಣವೆಲ್ಲಾ ಖರ್ಚಾಗುತ್ತಿದೆ. ಹೀಗಾಗಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಜನರಿಗೆ ಉತ್ತರ ಕೊಡಲು ಆಗ್ತಾ ಇಲ್ಲ. ಇನ್ನು ಎರಡು ವರ್ಷ ತಾಳ್ಮೆಯಿಂದ ಜನರು ಕಾಯಬೇಕು. ಆಗ ನಮ್ಮ ಮೈತ್ರಿ ಪಕ್ಷ ಅಧಿಕಾರಕ್ಕೆ ಬರುತ್ತೆ. ಆಗ ತಾಲೂಕಿಗೆ ಎಷ್ಟು ಬೇಕೋ ಅಷ್ಟು ಹಣ ತಂದು ಅಭಿವೃದ್ಧಿ ಮಾಡುವೆ ಎಂದು ಹೇಳಿದರು. ಸರ್ಕಾರಿ ಶಾಲಾ ಶಿಕ್ಷಕರಲ್ಲಿ ಪ್ರಾಮಾಣಿಕತೆಯ ಕೊರತೆ ಇದೆ. ವಸತಿ ಶಾಲೆಯಲ್ಲಿ ಶೇ 100 ರಷ್ಟು ಫಲಿತಾಂಶ ಬರುತ್ತದೆ. ಆದರೆ ಸರ್ಕಾರಿ ಶಾಲೆಯಲ್ಲಿ ನಿರೀಕ್ಷಿತ ಫಲಿತಾಂಶ ಬರುವುದಿಲ್ಲ. ಕಾರಣವೇನೆಂದು ತಿಳಿಯುತ್ತಿಲ್ಲ. ವಸತಿ ಶಾಲೆಯ ಶಿಕ್ಷಕರ ವೇತನಕ್ಕೂ, ಸರ್ಕಾರಿ ಶಾಲೆಯ ಶಿಕ್ಷಕರ ವೇತನಕ್ಕೂ ಬಹಳ ವ್ಯತ್ಯಾಸವಿದೆ. ಆದರೂ ವಸತಿ ಶಾಲೆಯಲ್ಲಿನ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚು ಕಂಡು ಬರುತ್ತದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರಾಜಕುಮಾರ್, ಸಿದ್ದಗಂಗಯ್ಯ, ರಾಮಣ್ಣ, ಕುಮಾರ್, ನರಸೇಗೌಡ, ವಿಜಯೇಂದ್ರ, ಮಂಗೀಕುಪ್ಪೆ ಬಸವರಾಜು, ಎಇಇ ಹರೀಶ್, ಗುತ್ತಿಗೆದಾರ ಶ್ರೀನಾಥ್ ಸೇರಿದಂತೆ ಶಾಲಾ ಮಕ್ಕಳು ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಲಾರ ವೈದ್ಯಕೀಯ ಕಾಲೇಜು, ರೈತ ಮಾಲ್‌ ಸ್ಥಾಪನೆ
ಭದ್ರಾ ಮೇಲ್ದಂಡೆ ಯೋಜನೆಗೆ ಮತ್ತೆ ಮಹಾದ್ರೋಹ