ಅಧ್ಯಕ್ಷರ ಆಯ್ಕೆಗೆ ಸಂಘಟನಾ ಚತುರರಿಗೆ ಆದ್ಯತೆ

KannadaprabhaNewsNetwork |  
Published : Oct 22, 2026, 01:45 AM IST
21ಎಚ್ಎಸ್ಎನ್13 :  | Kannada Prabha

ಸಾರಾಂಶ

ಈ ಹಿಂದೆ ಕೆಲವರು ತಮ್ಮ ಬೆಂಬಲಿಗರನ್ನು ಕರೆತಂದು ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಿಸುವಂತೆ ಶಿಫಾರಸು ಮಾಡುತ್ತಿದ್ದರು. ಆದರೆ, ಇದೀಗ ಕೆಪಿಸಿಸಿ ಮತ್ತು ಎಐಸಿಸಿ ಮಾರ್ಗದರ್ಶನದಲ್ಲಿ ಸಂಘಟನಾ ಸಾಮರ್ಥ್ಯ, ಪಕ್ಷದ ಬೆಳವಣಿಗೆಗೆ ನೀಡಿದ ಕೊಡುಗೆ ಹಾಗೂ ಪಕ್ಷವನ್ನು ಮುನ್ನಡೆಸುವ ಅರ್ಹತೆಯ ಆಧಾರದಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಆಯ್ಕೆ ಪ್ರಕ್ರಿಯೆಯ ವೀಕ್ಷಕರಾಗಿ ಮೂವರು ನಿಯೋಜಿತರಾಗಿದ್ದು, ಆಕಾಂಕ್ಷಿಗಳು ಸಲ್ಲಿಸುವ ಅರ್ಜಿಗಳನ್ನು ಕ್ರಮಸಂಖ್ಯೆಯೊಂದಿಗೆ ದಾಖಲಿಸಲಾಗುತ್ತದೆ. ಬಳಿಕ ಆಕಾಂಕ್ಷಿಗಳ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಲು ಬರುವ ಕಾರ್ಯಕರ್ತರ ಗುಂಪುಗಳಿಂದಲೂ ಮಾಹಿತಿ ಸಂಗ್ರಹಿಸಿ, ಅವರ ಸಹಿ ಪಡೆಯಲಾಗುತ್ತದೆ. ಸಂಗ್ರಹಿಸಿದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಸಂಘಟನಾ ಸಾಮರ್ಥ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಹೇಳಿದರು.ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಸಂಘಟನಾ ಸೃಜನ್ ಅಭಿಯಾನ’ದಲ್ಲಿ ಮಾತನಾಡಿದ ಅವರು, ಈ ಹಿಂದೆ ಕೆಲವರು ತಮ್ಮ ಬೆಂಬಲಿಗರನ್ನು ಕರೆತಂದು ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಿಸುವಂತೆ ಶಿಫಾರಸು ಮಾಡುತ್ತಿದ್ದರು. ಆದರೆ, ಇದೀಗ ಕೆಪಿಸಿಸಿ ಮತ್ತು ಎಐಸಿಸಿ ಮಾರ್ಗದರ್ಶನದಲ್ಲಿ ಸಂಘಟನಾ ಸಾಮರ್ಥ್ಯ, ಪಕ್ಷದ ಬೆಳವಣಿಗೆಗೆ ನೀಡಿದ ಕೊಡುಗೆ ಹಾಗೂ ಪಕ್ಷವನ್ನು ಮುನ್ನಡೆಸುವ ಅರ್ಹತೆಯ ಆಧಾರದಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಆಯ್ಕೆ ಪ್ರಕ್ರಿಯೆಯ ವೀಕ್ಷಕರಾಗಿ ಮೂವರು ನಿಯೋಜಿತರಾಗಿದ್ದು, ಆಕಾಂಕ್ಷಿಗಳು ಸಲ್ಲಿಸುವ ಅರ್ಜಿಗಳನ್ನು ಕ್ರಮಸಂಖ್ಯೆಯೊಂದಿಗೆ ದಾಖಲಿಸಲಾಗುತ್ತದೆ. ಬಳಿಕ ಆಕಾಂಕ್ಷಿಗಳ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಲು ಬರುವ ಕಾರ್ಯಕರ್ತರ ಗುಂಪುಗಳಿಂದಲೂ ಮಾಹಿತಿ ಸಂಗ್ರಹಿಸಿ, ಅವರ ಸಹಿ ಪಡೆಯಲಾಗುತ್ತದೆ. ಸಂಗ್ರಹಿಸಿದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಹಾಸನ ಜಿಲ್ಲೆಯ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲು ಅನುಭವಿಸಿದೆ. ಇದಕ್ಕೆ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳೂ ಕಾರಣವಾಗಿವೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು, ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಒಗ್ಗಟ್ಟಿನ ಪ್ರಯತ್ನ ಕಾರಣವಾಗಿದೆ. ಅದೇ ರೀತಿಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು. ಪಕ್ಷದ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಳಿಕ ಅವರು ಯಾರೇ ಆಗಿರಲಿ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ಮನೋಭಾವ ಕಾರ್ಯಕರ್ತರಲ್ಲಿ ಇರಬೇಕು. ಮುಂದಿನ ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ವಿಜಯಧ್ವಜ ಹಾರಿಸಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಮುರಳಿ ಮೋಹನ್ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಸಕ್ತರು ಅರ್ಜಿ ಸಲ್ಲಿಸಲು ಪಕ್ಷ ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಸಿದವರು ಆಯ್ಕೆ ಪ್ರಕ್ರಿಯೆಯ ಬಗ್ಗೆ ಗೊಂದಲ ಮಾಡಿಕೊಳ್ಳದೆ, ಪಕ್ಷದ ನಿರ್ಧಾರವನ್ನು ಗೌರವಿಸಬೇಕು ಎಂದರು.ಪಕ್ಷದ ವರಿಷ್ಠರು ಯಾರಿಗೆ ಬಿ-ಫಾರಂ ನೀಡುತ್ತಾರೋ, ಅವರನ್ನು ಗೆಲ್ಲಿಸುವುದು ಕಾರ್ಯಕರ್ತರ ಜವಾಬ್ದಾರಿ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆಗೆ ಶ್ರಮಿಸಬೇಕು. ಪಕ್ಷ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡದೆ, ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿರಾವ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ತಳಮಟ್ಟದ ಕಾರ್ಯಕರ್ತರ ಕೊಡುಗೆ ಮಹತ್ವದ್ದಾಗಿದೆ. ನಾಯಕರು ಬದಲಾಗಬಹುದು, ಆದರೆ ಪಕ್ಷವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಬ್ಲಾಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ, ತಮ್ಮ ಅಭಿಪ್ರಾಯಗಳನ್ನು ವೀಕ್ಷಕರಿಗೆ ತಿಳಿಸಬಹುದು. ಈ ಅಭಿಪ್ರಾಯಗಳನ್ನು ಕೆಪಿಸಿಸಿ ಮತ್ತು ಎಐಸಿಸಿಗೆ ಸಲ್ಲಿಸಲಾಗುವುದು ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ 20ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದು, ಆಕಾಂಕ್ಷಿಗಳ ಪರವಾಗಿ ಮಾತನಾಡಲು ಕಾರ್ಯಕರ್ತರ ಆರು ಮಂದಿಯ ಗುಂಪುಗಳನ್ನು ರಚಿಸಿ ಅವರ ಅಭಿಪ್ರಾಯ ಸಂಗ್ರಹಿಸಲಾಯಿತು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರಮುಡಿ ಚಂದ್ರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರ್ಷೋಧ್ಘಾರದೊಂದಿಗೆ ನಡೆದ ಅಶ್ವವಾಹನೋತ್ಸವದ ಜಂಬೂಸವಾರಿ
ಅ.23ರಂದು ಗಣಂಗೂರು ಟೋಲ್‍ ಬಂದ್: ರೈತ ಸಂಘ ತೀರ್ಮಾನ