ಕನ್ನಡಪ್ರಭ ವಾರ್ತೆ, ಯಳಂದೂರು
ಕೊಳ್ಳೇಗಾಲ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಬಾರಿಯ ಮುಖ್ಯಮಂತ್ರಿಗಳ ವಿಶೇಷ ಅನುದಾನದ ₹೫೦ ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿಗೆ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.ತಾಲೂಕಿನ ಮದ್ದೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ನಿರ್ಮಿತಿ ಕೇಂದ್ರದ ವತಿಯಿಂದ ೩೦ ಲಕ್ಷ ರು. ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಭೂಮಿ ಪೂಜೆಗೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಸೇತುವೆ ಹಾಗೂ ಅಂಬೇಡ್ಕರ್ ಭವನ, ಉಪ್ಪಾರ ಭವನ, ವಾಲ್ಮೀಕಿ ಭವನ, ಕನಕ ಭವನ ಅಭಿವೃದ್ಧಿಗೆ ಅನುದಾನವನ್ನು ನೀಡಿದ್ದೇನೆ. ಮದ್ದೂರು ಗ್ರಾಮದ ಸೇತುವೆ ನಿರ್ಮಾಣಕ್ಕೆ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ನೀರಾವರಿ ಇಲಾಖೆಯ ವತಿಯಿಂದ ₹೪ ಕೋಟಿ ವೆಚ್ಚ ಹಾಗೂ ಗಣಿಗನೂರು ಗ್ರಾಮದಲ್ಲಿ ೭೦ ಲಕ್ಷ ರು.ವೆಚ್ಚದಲ್ಲಿ ಸೇತುವೆಗೆ ಅನುಮೋದನೆಯಾಗಿ ಅಂತಿಮ ಹಂತದ ಟೆಂಡರ್ ಹಂತದಲ್ಲಿದೆ. ಗ್ಯಾರಂಟಿ ಯೋಜನೆಗಳ ಅನಿಷ್ಠಾನದಲ್ಲಿ ಚಾಮರಾಜನಗರ ಜಿಲ್ಲೆಯು ಶೇ.೧೦೦ರಷ್ಟು ಪ್ರಗತಿ ಸಾಧಿಸುವ ಮೂಲಕ ಮುಂಚೂಣಿಯಲ್ಲಿ ಇದೆ ಎಂದು ತಿಳಿಸಿದರು.ಜಿಲ್ಲಾ ಗಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಮುಂದಿನ ದಿನಗಳಲ್ಲಿ ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಕುದೇರು ಸುತ್ತಮುತ್ತ ಗ್ರಾಮಗಳಲ್ಲಿ ೩ ನೇ ಹಂತದ ಕೈಗಾರಿಕ ಕಂಪನಿಗಳ ಸ್ಥಾಪನೆ ಮಾಡುವ ಯೋಜನೆ ಮಾಡಲಾಗುತ್ತಿದೆ, ಜತೆಗ ಕೊಳ್ಳೇಗಾಲದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಜಾಗವನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ, ಈ ಯೋಜನೆಗಳಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗಲಿದೆ.ಈ ಸಂದರ್ಭದಲ್ಲಿ ಮದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಿರ್ಮಿತಿ ಕೇಂದ್ರದ ಜೆಇ ನಂದೀಶ್, ಟಿಎಪಿಎಂಎಸ್ ಮಾಜಿ ಅಧ್ಯಕ್ಷ ಮದ್ದೂರು ಶ್ರೀಕಂಠ, ಮುಖಂಡರಾದ ಮಲ್ಲಿಕಾರ್ಜನಸ್ವಾಮಿ, ಚಕ್ರವರ್ತಿ, ಎಂ.ಪಿ.ನಾರಯಣ್‌ಸ್ವಾಮಿ, ಜಾನಿ, ಮರಿಸ್ವಾಮಿ, ರಾಜು, ಚಿಕ್ಕಣ್ಣ, ಎಂ.ನಂಜುಂಡಸ್ವಾಮಿ, ಶಿವಪ್ರಸಾದ್, ಮಾಂಬಳ್ಳಿ ಸಬ್ ಇನ್ಸ್‌ಪೆಕ್ಟರ್ ಕರಿಬಸಪ್ಪ ಸೇರಿದಂತೆ ಇತರರು ಹಾಜರಿದ್ದರು.