ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.
ಸುರಕ್ಷಿತವಾಗಿ ಕನ್ನಡಿಗರ ವಾಪಸ್‌ಗೆ ಕ್ರಮ:ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.
ಅಮೆರಿಕ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ. ಇರಾನ್ ಅಧ್ಯಕ್ಷ ಆಯತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ:ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.
ಸಂಕೇತ್ ಕುಟುಂಬಕ್ಕೆ ಸಿಎಂ ಪರಿಹಾರ ಚೆಕ್ಶಿವಮೊಗ್ಗದ ಊರಗಡೂರಿನಲ್ಲಿ ಕೊಲೆಯಾದ ಬಾಲಕನ ಕುಟುಂಬಕ್ಕೆ ಶಿವಮೊಗ್ಗ ಏರ್ಪೋರ್ಟ್‌ನಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ 15 ಲಕ್ಷ ರು. ಪರಿಹಾರದ ಚೆಕ್ ವಿತರಿಸಿದರು.
ಮೃತ ಬಾಲಕ ಸಂಕೇತ್‌ನ ತಂದೆ ಕುಮಾರ್ ಮತ್ತು ತಾಯಿ ಮಂಜುಳಾಗೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರು. ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರು. ಪರಿಹಾರ ಚೆಕ್ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭ ಸಿಎಂ ಸಿದ್ದರಾಮಯ್ಯ ಅವರಗೆ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ನಗರದ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಸಹಕಾರ ನೀಡಿದರು.