ಕನ್ನಡಪ್ರಭ ವಾರ್ತೆ ಬೆಂಗಳೂರು:
ಮೊದಲ 100 ದಿನಗಳಲ್ಲೇ 72 ಸಾವಿರ ಸರ್ಕಾರಿ ಹುದ್ದೆ ನೇಮಕ, 15 ಸಾವಿರ ಶಿಕ್ಷಕರ ನೇಮಕಾತಿ, ಖಾಸಗಿ ಉದ್ಯೋಗ ವಿನಿಮಯ ಕೇಂದ್ರ, ‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’, 2 ವರ್ಷದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಗುರಿಯಂಥ ಸಾಲು-ಸಾಲು ಕಾರ್ಯಕ್ರಮಗಳ ಮೂಲಕ ಯುವಕರನ್ನು ಸೆಳೆಯಲು ಯಶಸ್ವಿಯಾಗಿದೆ.
ಉದ್ಯೋಗದಾತರಿಗೆ ಪ್ರತಿ ಹೊಸ ಉದ್ಯೋಗಕ್ಕೆ ₹2,500 ಪ್ರೋತ್ಸಾಹಧನ, 6ನೇ ತರಗತಿಯಿಂದ ಎಐ ಶಿಕ್ಷಣ, ಎಐ ಅಕ್ಷರ ಅಭಿಯಾನ, ಕೋಡಿಂಗ್ ಗುರುಕುಲ. ಹೀಗೆ ಉದ್ಯೋಗದಿಂದ ಎಐವರೆಗೆ ಯುವಕರ ಉಜ್ವಲ ಭವಿಷ್ಯ ಕಟ್ಟಲು ಮುಂದಾದ ಕಾರ್ಯಕ್ರಮಗಳು ಮೆಚ್ಚುಗೆ ಗಳಿಸಿವೆ.ಮೊದಲ ಸಂಪುಟದಲ್ಲೇ ಸೂಪರ್ ಸಿಕ್ಸ್:
10,000 ಭಾರತ್ ಜೋಡೋ ಯುವ ಸಂಘಟನೆ ರಚನೆ, ಉದ್ಯೋಗಕ್ಕಾಗಿ ಬೀದಿಗಿಳಿದ ಯುವಕರ ಸಿಟ್ಟು ತಣಿಸಲು 56,432 ಹುದ್ದೆ ನೇಮಕಾತಿ ಪ್ರಕಟ, ಸರ್ಕಾರದಿಂದ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆಯಂತಹ ಹತ್ತು ಹಲವು ಘೋಷಣೆ ಮಾಡಿದರು.
ಬೆಂಗಳೂರಿನಲ್ಲಿ ಎಐ ವಿಶ್ವವಿದ್ಯಾಲಯ ಸ್ಥಾಪನೆ ಘೋಷಿಸುವ ಮೂಲಕ ತಂತ್ರಜ್ಞಾನ ಹಾಗೂ ಎಐಗೆ ವಿಶೇಷ ಆದ್ಯತೆ ನೀಡಿದ್ದಾರೆ. ಬೆಂಗಳೂರನ್ನು''''''''ಡೀಪ್-ಟೆಕ್ ಹಬ್’ ಹಾಗೂ ಜವಾಬ್ದಾರಿಯುತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೇಂದ್ರವನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. ಜತೆಗೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ 7.5ರಷ್ಟು ಮೀಸಲಾತಿ ಸೇರಿದಂತೆ ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ.
ಸರ್ಕಾರದ ನಿರ್ಧಾರಗಳು ಯುವಕರ ಭವಿಷ್ಯ, ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ನೀಡುತ್ತಿವೆ. ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಶಿಕ್ಷಣದಿಂದ ಉದ್ಯೋಗದವರೆಗೆ ಯುವಕರಿಗೆ ಹೊಸ ಅವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ನಿರ್ಧಾರವು ವಿದ್ಯಾರ್ಥಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿದೆ.
‘ಭಾರತ ಜೋಡೋ ಯುವಕರ ಸಂಘ’ವನ್ನು ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಸ್ಥಾಪಿಸಿ, ಪ್ರತಿ ಸಂಘಕ್ಕೆ ₹10 ಲಕ್ಷ ನೀಡುವ ನಿರ್ಧಾರವೂ ಯುವಕರನ್ನು ಸಾಮಾಜಿಕ ಅಭಿವೃದ್ಧಿಯ ಭಾಗವಾಗಿಸುವ ಪ್ರಯತ್ನವಾಗಿದೆ.
ನೇಮಕಾತಿ ಸುಧಾರಣೆಗೆ ಯತ್ನ: