ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಇಲ್ಲಿನ ಖಾಸಗಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಬಗ್ಗೆ ಆಸಕ್ತಿ ಮತ್ತು ತಕ್ಕಮಟ್ಟಿನ ಜ್ಞಾನ ಹೊಂದಿದ್ದು, ಈಗಾಗಲೇ ಹಿರಿಯ ಸಾಹಿತಿಗಳು, ಕನ್ನಡ ಪರ ಹೋರಾಟಗಾರರ ಸಹಕಾರ ಮತ್ತು ಮಾರ್ಗದರ್ಶನ ಕೋರಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯನ್ನಾಗಿ ರೂಪಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ ಧ್ಯೇಯೋದ್ದೇಶಗಳಾದ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಗುರಿ ಹೊಂದಲಾಗಿದೆ. ಕನ್ನಡ, ಕನ್ನಡಿಗ, ಕರ್ನಾಟಕ ಎಂಬ ಪರಿಕಲ್ಪನೆಯ ಕಾರ್ಯಕ್ರಮಗಳ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿ ನಿರಂತರವಾಗಿ ನಡೆಯುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳ ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಆಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ರಾಜ್ಯಾಧ್ಯಕ್ಷ ನೆಲೆಯಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯ ಸೇವೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಸದಸ್ಯರಲ್ಲಿ ಕೋರುವುದಾಗಿ ಅವರು ಹೇಳಿದರು.
ರಾಜ್ಯ ಮತ್ತು ಕೇಂದ್ರದ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕನಾಗಿ, ತುಮಕೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ವೇಳೆ ಕನ್ನಡ ಭಾಷೆಗೆ ವಿಶೇಷ ಆದ್ಯತೆ ನೀಡಿರುವುದಾಗಿ ಹೇಳಿದರು.
ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್, ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್, ದೊಡ್ಡಬಳ್ಳಾಪುರದ ಯೋಜನಾ ಪ್ರಾಧಿಕಾರ ಸದಸ್ಯ ಕೆ.ಎಂ.ಕೃಷ್ಣಮೂರ್ತಿ, ಲಯನ್ಸ್ ಕ್ಲಬ್ ಅಧ್ಯಕ್ಷೆ ವಸುಂಧರಾ ದೇವಿ, ಶರಣ ಸಾಹಿತ್ಯ ಪರಿಷತ್ತಿನ ಕೆ.ಮಹಾಲಿಂಗಯ್ಯ, ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಮಹಿಳಾ ಸಮಾಜ ಅಧ್ಯಕ್ಷೆ ಎಂ.ಕೆ.ವತ್ಸಲ, ಕಸಾಪ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಮಹದೇವ್ ಮತ್ತಿತರರು ಭಾಗವಹಿಸಿದ್ದರು.