ಗದಗ: ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ವೃದ್ಧಿಸಲು ತಾಂತ್ರಿಕ ಶಿಕ್ಷಣದ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವೆಂಬುದನ್ನು ಅರಿತುಕೊಳ್ಳಬೇಕಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ತಿಳಿಸಿದರು.ತಾಲೂಕಿನ ಬೆಳಧಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಟಗೇರಿ- ಗದುಗಿನ ಅಮರಶಿಲ್ಪಿ ಜಕಣಾಚಾರಿ ಕಟ್ಟಡ ನಿರ್ಮಾಣ ಕೂಲಿಕಾರ್ಮಿಕರ ಸಂಘ ಏರ್ಪಡಿಸಿದ್ದ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಮತ್ತು ಸಂಘದ ವಾರ್ಷಿಕೋತ್ಸವ ಸಮಾರಂಭ ಹಾಗೂ ನಿವೃತ್ತ, ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಅಮರಶಿಲ್ಪಿ ಜಕಣಾಚಾರಿ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘವು ಪ್ರತಿ ವರ್ಷ ಈ ರೀತಿಯ ರಚನಾತ್ಮಕ ಕಾರ್ಯ ಮಾಡಿಕೊಂಡು ಬಂದಿದ್ದು, ಬರಲಿರುವ ದಿನಗಳಲ್ಲಿ ಇಂತಹ ಕಾರ್ಯಕ್ರಮ ರೂಪಿಸುವ ಮುನ್ನ ಸಂಘಟನೆಯವರು ನನ್ನೊಂದಿಗೆ ಚರ್ಚಿಸಿದಲ್ಲಿ ನನ್ನ ವಿಚಾರಗಳನ್ನು ತಿಳಿಸುವ ಮೂಲಕ ನನ್ನಿಂದ ಏನು ಸಹಕಾರ ಮಾಡಲು ಸಾಧ್ಯ ಎಂಬುದನ್ನು ಪರಾಮರ್ಶಿಸುವೆ ಎಂದರು.ಅಧ್ಯಕ್ಷತೆ ವಹಿಸಿದ್ದ ಅಮರಶಿಲ್ಪಿ ಜಕಣಾಚಾರಿ ಕಟ್ಟಡ ನಿರ್ಮಾಣ ಕೂಲಿಕಾರ್ಮಿಕರ ಸಂಘದ ಅಧ್ಯಕ್ಷ ಈಶಪ್ಪ ಬಳ್ಳಾರಿ, ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಅಧಿಕಾರಿ ಜಿ.ಎಚ್. ಬಾವಿಕಟ್ಟಿ, ಬೆಳಧಡಿ ಗ್ರಾಪಂ ಅಧ್ಯಕ್ಷ ಬಸವರಾಜ ಪೂಜಾರ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಈರಣ್ಣ ಕಲ್ಮಠ, ನಗರಸಭೆಯ ಸದಸ್ಯ ಚಂದ್ರಶೇಖರಗೌಡ ಕರಿಸೋಮನಗೌಡ್ರ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ಸುಷ್ಮಾ ಮೈತ್ರಿ, ಕಾರ್ಮಿಕ ಕಲ್ಯಾಣ ಸಂಸ್ಥೆ ಮಹಮ್ಮದ್ ಇರ್ಫಾನ್ ಡಂಬಳ ಆಗಮಿಸಿದ್ದರು.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ, ಗ್ರಾಪಂ ಮಾಜಿ ಅಧ್ಯಕ್ಷ ಶಂಕ್ರಪ್ಪ ಹೊಸಮನಿ, ಕುಬೇರಪ್ಪ ಪವಾರ, ಪ್ರಶಸ್ತಿ ವಿಜೇತ ಶಿಕ್ಷಕಿ ಕರ್ಜಗಿ, ಫಕ್ಕೀರೇಶ ಗಾಣಿಗೇರ, ಎಸ್.ಪಿ. ಕರಿಸೋಮನಗೌಡ್ರ, ಮಹಾಂತೇಶ ಕೊಪ್ಪದ, ಸಿದ್ಧಿ ಮೊಹ್ಮದ್, ಮೋತಿಲಾಲ ಮ್ಯಾಳಗಿಮನಿ, ಚಾಂದಸಾಬ ಅಬ್ಬಿಗೇರಿ, ಚನ್ನವೀರಗೌಡ ಪಾಟೀಲ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಶಂಕರಗೌಡ ಭರಮಗೌಡ್ರ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಭೋಜರಾಜ ಹಡಪದ ನಿರೂಪಿಸಿದರು. ನಿಂಗಪ್ಪ ಕಟ್ಟಿಮನಿ ವಂದಿಸಿದರು.