ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರು ವಿವಿಯ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿಗಳು ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಶೈಕ್ಷಣಿಕ ವ್ಯಕ್ತಿ ವಿವರಗಳನ್ನು ಬಳಸುವ ಮೂಲಕ ಸಂಶೋಧನಾ ಗೋಚರತೆಯನ್ನು ಹೆಚ್ಚಿಸುವಿಕೆ’ ಕುರಿತ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಉನ್ನತ ಸಂಶೋಧನಾ ನಿಯತಕಾಲಿಕೆಗಳಲ್ಲಿ ಪ್ರಬಂಧಗಳನ್ನು ಪ್ರಕಟಿಸುವುದು ಆಯಾ ಸಂಶೋಧನಾರ್ಥಿಯ ವಿವೇಚನೆಗೆ ಬಿಟ್ಟದ್ದು ಎಂದು ಯುಜಿಸಿಯು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹಿಂದೆ ಕಡ್ಡಾಯವಾಗಿ ಎರಡು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುವ ಮಾರ್ಗಸೂಚಿಯಿತ್ತು. ಹೊಸ ನಿಯಮಗಳು ಸಂಶೋಧನೆಯ ಮಟ್ಟವನ್ನು ಎಲ್ಲಿಗೆ ಕೊಂಡೊಯ್ಯುತ್ತಿವೆ ಎನ್ನವುದೇ ಯಕ್ಷ ಪ್ರಶ್ನೆಯಾಗಿದೆ ಎಂದರು.ಧನ ಸಹಾಯ ಆಯೋಗಗಳು ಹಾಗೂ ಉದ್ಯೋಗ ಸಂಸ್ಥೆಗಳು ಬಯಸುವುದು ಗುಣಮಟ್ಟದ ಸಂಶೋಧನಾ ಪ್ರಬಂಧಗಳನ್ನು. ಉನ್ನತ ಸಂಶೋಧನಾ ನಿಯತಕಾಲಿಕಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುವುದರಿಂದ ಮಾತ್ರ ಪಿಎಚ್‌ಡಿಗೆ ಬೆಲೆ ಬರುವುದು. ಯುಜಿಸಿಯಿಂದ ಮಾನ್ಯತೆ ಪಡೆದ ನಿಯತಕಾಲಿಕೆಗಳಲ್ಲಷ್ಟೇ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕು. ಹಣ ಪಡೆಯುವ ನಕಲಿ ನಿಯತಕಾಲಿಕೆಗಳನ್ನು ನಂಬಬಾರದು ಎಂದು ತಿಳಿಸಿದರು.
ಕುಲಸಚಿವೆ ನಾಹಿದಾ ಜಮ್ ಜಮ್, ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿಗಳ ನಿರ್ದೇಶಕ ಪ್ರೊ. ಬಿ. ಟಿ. ಸಂಪತ್ ಕುಮಾರ್, ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಪ್ರೊ. ರಮೇಶ್ ಬಿ. ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ರೂಪೇಶ್ ಕುಮಾರ್ ಎ. ನಿರೂಪಿಸಿದರು.