ಕೌಟುಂಬಿಕ ವ್ಯಾಜ್ಯ ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ಕೂಡ ದೀರ್ಘಕಾಲ ನಡೆಸುವ ಬದಲು ಪರಸ್ಪರ ಬುದ್ಧಿವಾದ ಹೇಳಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವಂತೆ ವಕೀಲರಿಗೆ ನ್ಯಾಯಾಧೀಶರಾದ ಅಕ್ಷತಾ ಸಿ.ಆರ್. ಸಲಹೆ ನೀಡಿದರು.
ಮುಂಡಗೋಡ: ಪ್ರತಿಯೊಂದು ಪ್ರಕರಣಕ್ಕೂ ಕೋರ್ಟ್, ಕಚೇರಿ ಮೆಟ್ಟಿಲೇರುವ ಬದಲು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಇದಕ್ಕೆ ಸಾರ್ವಜನಿಕರ ಸಹಾಯ, ಸಹಕಾರ ಅತ್ಯವಶ್ಯ ಎಂದು ಮುಂಡಗೋಡ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಅಕ್ಷತಾ ಸಿ.ಆರ್. ತಿಳಿಸಿದರು.
ಶುಕ್ರವಾರ ಸಂಜೆ ಇಲ್ಲಿಯ ಸಿವಿಲ್ ನ್ಯಾಯಾಲಯ ಸಭಾಂಗಣದಲ್ಲಿ ಡಿ. ೧೪ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಾಲಗಾರರ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಪೂರ್ವದಲ್ಲಿಯೇ ಪ್ರಿ ಲಿಟಿಗೇಷನ್‌ನಲ್ಲಿ ದಂಡ ಬಡ್ಡಿ ಕಡಿತಗೊಳಿಸಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿ ಬ್ಯಾಂಕ್ ಹಂತದಲ್ಲಿಯೇ ಇತ್ಯರ್ಥಪಡಿಸಿಕೊಳ್ಳಲು ಬ್ಯಾಂಕ್‌ನವರು ಪ್ರಯತ್ನಿಸಬೇಕು ಎಂದರು. ಕೌಟುಂಬಿಕ ವ್ಯಾಜ್ಯ ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ಕೂಡ ದೀರ್ಘಕಾಲ ನಡೆಸುವ ಬದಲು ಪರಸ್ಪರ ಬುದ್ಧಿವಾದ ಹೇಳಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವಂತೆ ವಕೀಲರಿಗೆ ಸಲಹೆ ನೀಡಿದರು. ಹೆಲ್ಮೆಟ್ ಧರಿಸದೆ ವಾಹನ ಚಾಲನೆ, ಪರವಾನಗಿ ರಹಿತ ವಾಹನ ಚಾಲನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ವಾರೆಂಟ್ ಹಾಗೂ ಸಮನ್ಸ್ ನೀಡುವಲ್ಲಿ ವಿಳಂಬ ಮಾಡದೆ ತ್ವರಿತ ಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು. ವಕೀಲರ ಸಂಘದ ಅಧ್ಯಕ್ಷ ನಟರಾಜ ಕಾತೂರ, ಸರ್ಕಾರಿ ವಕೀಲ ಪ್ರಸಾದ ಹೆಗಡೆ, ಮುಂಡಗೋಡ ಠಾಣೆ ಸಿಪಿಐ ರಂಗನಾಥ ನೀಲಮ್ಮನವರ, ಪಿಎಸ್‌ಐ ಪರಶುರಾಮ ಮಿರ್ಜಗಿ, ವಿವಿಧ ಬ್ಯಾಂಕ್ ಹಾಗೂ ಸಹಕಾರಿ ಸಂಘ ಸಂಸ್ಥೆ ವ್ಯವಸ್ಥಾಪಕರು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜಶೇಖರ ಹುಬ್ಬಳ್ಳಿ ಸ್ವಾಗತಿಸಿದರು. ಶರತ ಪವಾರ ವಂದಿಸಿದರು.ಇಂದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ
ಯಲ್ಲಾಪುರ:ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಜಿಪಂ, ಉಪನಿರ್ದೇಶಕರ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ನ. ೧೬ರಂದು ೨೦೨೪- ೨೫ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ಪಟ್ಟಣದ ವೈಟಿಎಸ್ಎಸ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ ೯.೩೦ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ, ರಾ.ವಿ.ಯೋ.ಮ.ಅ. ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ ಅಂಗಡಿ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣವರ, ತಾಪಂ ಆಡಳಿತಾಧಿಕಾರಿ ನಟರಾಜ ಟಿ.ಎಚ್. ಇತರರು ಭಾಗವಹಿಸುವರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.