ಹಾರೋಹಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ

KannadaprabhaNewsNetwork |  
Published : Nov 03, 2026, 01:15 AM IST
 | Kannada Prabha

ಸಾರಾಂಶ

ಹಾರೋಹಳ್ಳಿ: ಬೆಂಗಳೂರು ನಗರಕ್ಕೆ ಸಮೀಪದಲ್ಲಿರುವ ಹಾರೋಹಳ್ಳಿ ಹೊಸ ತಾಲೂಕು ರಚನೆಯಾದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಂಡಿಲ್ಲ. ವೇಗವಾಗಿ ಬೆಳೆಯುತ್ತಿರುವ ಪಟ್ಟಣಕ್ಕೆ ಅಗತ್ಯವಾದ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಹಾರೋಹಳ್ಳಿ: ಬೆಂಗಳೂರು ನಗರಕ್ಕೆ ಸಮೀಪದಲ್ಲಿರುವ ಹಾರೋಹಳ್ಳಿ ಹೊಸ ತಾಲೂಕು ರಚನೆಯಾದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಂಡಿಲ್ಲ. ವೇಗವಾಗಿ ಬೆಳೆಯುತ್ತಿರುವ ಪಟ್ಟಣಕ್ಕೆ ಅಗತ್ಯವಾದ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಪಟ್ಟಣದ ಮುಖ್ಯರಸ್ತೆಯಲ್ಲಿ ಗುಣಮಟ್ಟದ ವಿದ್ಯುತ್ ಬೀದಿ ದೀಪಗಳ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಾರೋಹಳ್ಳಿ ಪಟ್ಟಣದ ಮುಖ್ಯರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಆ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ಪಟ್ಟಣದ ಪ್ರಮುಖ ರಸ್ತೆಗಳಿಗೆ ಹೊಸ ರೂಪ ದೊರೆಯುವುದರ ಜತೆಗೆ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಅನುಕೂಲವಾಗಲಿದೆ. ಪಟ್ಟಣದ ಸೌಂದರ್ಯ ಹೆಚ್ಚಿಸುವುದರೊಂದಿಗೆ ಸುರಕ್ಷಿತ ಸಂಚಾರಕ್ಕೂ ಸಹಕಾರಿಯಾಗಲಿದೆ ಎಂದರು.

ಅಳವಡಿಸಿರುವ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿ ನಡೆಯಬೇಕು. ದೀಪಗಳು ಕೆಟ್ಟುಹೋದರೆ ತಕ್ಷಣ ದುರಸ್ತಿ ಮಾಡಿಸುವ ಮೂಲಕ ನಿರಂತರ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಷ್ಟೇ ಅಲ್ಲದೆ ಅವುಗಳ ನಿರ್ವಹಣೆಯೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು.

ನಮ್ಮ ಜಿಲ್ಲೆಯವರೇ ಆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ರಾಮನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂಬ ಆಶಯ ಹೊಂದಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹಾರೋಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಹೆಚ್ಚಿನ ಅಭಿವೃದ್ಧಿಹೆಚ್ಚಿನ ಅಭಿವೃದ್ಧಿ ಕಾರ್ಯಗಳು ದೊರೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪಟ್ಟಣದ ಚಾಮುಂಡೇಶ್ವರಿ ದೇವಾಲಯದ ಮುಂಭಾಗ, ಡೈರಿ ಸರ್ಕಲ್, ಕುಂಬಾರ ಶೆಡ್ ಹಾಗೂ ಮುಖ್ಯರಸ್ತೆಗಳಲ್ಲಿ ಅಳವಡಿಸಿರುವ ಬೀದಿ ದೀಪಗಳ ವ್ಯವಸ್ಥೆ ಮತ್ತು ಅವುಗಳ ನಿರ್ವಹಣೆಯನ್ನು ಶಾಸಕ ಇಕ್ಬಾಲ್ ಹುಸೇನ್ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಜೆಸಿಬಿ ಅಶೋಕ್, ಹರೀಶ್, ಜಗದೀಶ್ವರ ಗೌಡ, ಎಚ್. ಶೇಖರ್, ಕೋಟೆ ಕುಮಾರ್, ಎಸ್.ಕೆ. ಸುರೇಶ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

(ಫೋಟೊ ಕ್ಯಾಫ್ಷನ್‌)

ಹಾರೋಹಳ್ಳಿ ಪಟ್ಟಣದ ಮುಖ್ಯರಸ್ತೆಯಲ್ಲಿ ಗುಣಮಟ್ಟದ ವಿದ್ಯುತ್ ಬೀದಿ ದೀಪಗಳ ಅಳವಡಿಕೆ ಕಾರ್ಯಕ್ಕೆ ಶಾಸಕ ಇಕ್ಬಾಲ್‌ ಹುಸೇನ್‌ ಚಾಲನೆ ನೀಡಿದರು. ಜೆಸಿಬಿ ಅಶೋಕ್, ಹರೀಶ್, ಜಗದೀಶ್ವರ ಗೌಡ, ಎಚ್. ಶೇಖರ್, ಕೋಟೆ ಕುಮಾರ್, ಎಸ್.ಕೆ. ಸುರೇಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ