ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ

KannadaprabhaNewsNetwork | Published : Oct 21, 2024 12:39 AM

ಸಾರಾಂಶ

ಮುಂಬರುವ ದಿನಗಳಲ್ಲಿ ಚೋಳೂರು ತಾಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲಿ ಸುಸಜ್ಜಿತ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಮೂಲ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು ಹಾಗೂ ವಸತಿ ಸೌಲಭ್ಯಕ್ಕೂ ಆದ್ಯತೆ ನೀಡಲಾಗುವುದು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಸದ್ಬಳಕೆಯಾಗಬೇಕು,

ಕನ್ನಡಪ್ರಭ ವಾರ್ತೆ ಚೇಳೂರುಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸುವುದರ ಜೊತೆಗೆ ಗುಣಮಟ್ಟದ ಕಾಮಗಾರಿಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಗ್ರಾಮಸ್ಥರಿಗೆ ಸಲಹೆ ನೀಡಿದರು. ತಾಲೂಕಿನ ಸೋಮನಾಥಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಸ್ತೆ, ಚರಂಡಿ ನಿರ್ಮಾಣ

ಸೋಮನಾಥಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸೀಮನ್ನಗಾರಪಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ಚರಂಡಿನಿರ್ಮಾಣಕ್ಕೆ ೨೦ ಲಕ್ಷ, ಸೋಮನಾಥಪುರ ಗ್ರಾಮದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ೭೦ ಲಕ್ಷ, ಮಂಗಳಮಡಗವರಪಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ೧೩ ಲಕ್ಷ, ದಿಗವನೆಟ್ಟಕುಂಟಪಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ೨೦ ಲಕ್ಷದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ತಾಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲಿ ಸುಸಜ್ಜಿತ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಮೂಲ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು ಹಾಗೂ ವಸತಿ ಸೌಲಭ್ಯಕ್ಕೂ ಆದ್ಯತೆ ನೀಡಲಾಗುವುದು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಅನುದಾನ ಸದ್ಬಳಕೆಯಾಗಬೇಕು, ಗುತ್ತಿಗೆದಾರರು ಮಾಡುವ ಕೆಲಸವನ್ನು ಗುಣಮಟ್ಟದಿಂದ ಮಾಡಿ’ ಎಂದು ಸೂಚಿಸಿದರು.

ಕಾಮಗಾರಿ ಗುಣಮಟ್ಟ ಕಾಪಾಡಿ

ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಯಲ್ಲಿ ಗುತ್ತಿಗೆದಾರರು ಗುಣಮಟ್ಟಕ್ಕೆ ಆದ್ಯತೆ ನೀಡಿ. ನಿಗದಿತ ಪ್ರಮಾಣದಲ್ಲಿ ಸಿಮೆಂಟ್, ಮರಳು ಮಿಶ್ರಣ ಬಳಸಿ ರಸ್ತೆ ನಿರ್ಮಾಣ ಮಾಡಬೇಕು. ಗುಣಮಟ್ಟದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಂ ಪಂಚಾಯತಿ ಅಧ್ಯಕ್ಷ ರಮಣರೆಡ್ಡಿ. ಸುರೇಂದ್ರ. ಕೆಜೆ ವೆಂಕಟರವಣಪ್ಪ.ಸದಸ್ಯವೆಂಕಟರವಣಪ್ಪ ವಿ,ಮಲ್ಲಿ ರೆಡ್ಡಿ, ಮುಖಂಡರಾದ ಕಡ್ಡಿಲು ವೆಂಕಟರವಣಪ್ಪ.ಪಿ ಸಿ ವೆಂಕಟೆವಣಪ್ಪ,ಎನ್ ಅಂಜಿನಪ್ಪ,ಜಿ ನರಸಿಂಹಪ್ಪ, ಸೇರಿದಂತೆ ಸ್ಥಳಿಯ ಮುಖಂಡರು ಹಾಜರಿದ್ದರು.

Share this article