ಕಣತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಪೃಥ್ವಿ ಅವಿರೋಧ ಆಯ್ಕೆ

KannadaprabhaNewsNetwork | Published : Aug 11, 2024 1:34 AM

ಸಾರಾಂಶ

ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ಹೊಸಹಳ್ಳಿ ಕ್ಷೇತ್ರದ ಪೃಥ್ವಿ ಜಯರಾಮ್ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಪೃಥ್ವಿ ಜಯರಾಮ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಅವಿರೋಧ ಆಯ್ಕೆ ಘೋಷಿಸಿದರು. ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಪೃಥ್ವಿ ಜಯರಾಮ್ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಸರ್ವ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನು ಮೂಲ ಸೌಕರ್ಯಗಳೊಂದಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಆಲೂರು

ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ. ಹೊಸಹಳ್ಳಿ ಕ್ಷೇತ್ರದ ಪೃಥ್ವಿ ಜಯರಾಮ್ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಪೃಥ್ವಿ ಜಯರಾಮ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಅವಿರೋಧ ಆಯ್ಕೆ ಘೋಷಿಸಿದರು.

ಫಲಿತಾಂಶದ ಬಳಿಕ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಪೃಥ್ವಿ ಜಯರಾಮ್ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಸರ್ವ ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನು ಮೂಲ ಸೌಕರ್ಯಗಳೊಂದಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ತಿಳಿಸಿದರು.

ನೂತನ ಅಧ್ಯಕ್ಷ ಪೃಥ್ವಿ ಜಯರಾಮ್ ಅವರಿಗೆ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್, ಹೆಮ್ಮಿಗೆ ಮೋಹನ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜು ನಾಕಲಗೂಡು, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಪಿ ಎಲ್ ನಿಂಗರಾಜು, ತಾಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಸ್ ಎಸ್ ಶಿವಮೂರ್ತಿ, ಶಾಂತಕೃಷ್ಣ, ಬ್ಲಾಕ್ ಕಾಂಗ್ರೆಸ್ ಪ. ಜಾತಿ, ಪಂಗಡದ ಅಧ್ಯಕ್ಷ ಲೋಕೇಶ್ ಅಜ್ಜೇನಹಳ್ಳಿ, ಕದಾಳು ಗ್ರಾ ಪಂ ಅಧ್ಯಕ್ಷ ಶಾಂತಪ್ಪ, ಕರವೇ ರಘು ಪಾಳ್ಯ, ವಜ್ರೇಶ್, ಮಹೇಂದ್ರ , ಜಗದೀಶ್, ಸಂದೇಶ್ ಹಳೇ ಆಲೂರು, ಮಡಬಲು ಲೋಕೇಶ್, ವಹೀದ್, ಕಬೀರ್, ಜಾಫರ್, ಉಪಾಧ್ಯಕ್ಷೆ ರಾಧಾ, ಸದಸ್ಯರಾದ ಕವಿತಾ, ನಿಂಗರಾಜು, ಪುಷ್ಪಾವತಿ, ಪದ್ಮ, ಶಾರದ, ನಾಗರತ್ನ, ಕವಿತಾ, ಕೃಷ್ಣೆಗೌಡ, ನಿರ್ವಾಣಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.

Share this article