ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೂಡಿಗೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಚಿಕ್ಕಮಗಳೂರಿನಿಂದ ನಲ್ಲೂರು ಕಡೆಗೆ ಸಂಚರಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸುತ್ತಿದ್ದಾಗ ದಾರಿ ಮಧ್ಯದಲ್ಲೇ ಚಂದ್ರಶೇಖರ್ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.