ಚಿಂತಾಮಣಿ: ಖಾಸಗಿ ಬಸ್ ಚಾಲಕನ ಆತಿವೇಗ ಹಾಗೂ ಆಜಾಗೃಕತೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ನಿವೃತ್ತ ಯೋಧನ ತಲೆ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಗರದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಜೀಪ್ ಚಾಲಕ ಶ್ರೀನಿವಾಸ್ (45 ವರ್ಷ) ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಮಾಜಿ ಸೈನಿಕರಾಗಿದ್ದಾರೆ. ಮೃತ ಶ್ರೀನಿವಾಸ್ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಘಟನಾ ವಿಷಯ ತಿಳಿದ ಸ್ಥಳಕ್ಕೆ ಎಎಸ್‌ಪಿ ಜಗನಾಥ್ ರೈ, ಡಿವೈಎಸ್‌ಪಿ ಮುರಳೀಧರ್ ಹಾಗೂ ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶಿಲನೆ ನಡೆಸಿ ಬಸ್‌ನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.