ಕೆರೆ ತಡೆಗೋಡೆಗೆ ಖಾಸಗಿ ಬಸ್‌ ಡಿಕ್ಕಿ: 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

KannadaprabhaNewsNetwork |  
Published : Aug 30, 2026, 01:30 AM IST
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ನೋಟ  | Kannada Prabha

ಸಾರಾಂಶ

Private bus crashes into lake barrier: More than 10 students injured

ಆನಂದಪುರ: ಆನಂದಪುರ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ಕಾಸ್ಪಾಡಿ ಕೆರೆ ಏರಿಯ ತಡೆ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಆನಂದಪುರ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಾಗರದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಆನಂದಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕಾಸ್ಪಾಡಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿನ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಸೇರಿ 48 ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು ಇದರಲ್ಲಿ 10 ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲ್ಕು ಜನ ವಿದ್ಯಾರ್ಥಿನಿಯರು ಹಾಗೂ ಓರ್ವ ಉಪನ್ಯಾಸಕಿಗೆ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯ ಕಳಿಸಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದಂತಾಗಿದೆ. ಬಸ್ಸು ಕೆರೆಗೆ ಪಲ್ಟಿಯಾಗಿದ್ದರೆ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ಹಣ ವಾಪಾಸ್‌ವರೆಗೂ ಹೋರಾಟ: ಬಿವೈವಿ
ಮುಂದಿನ ವಾರದಲ್ಲಿ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ: ಡಾ। ಪರಂ