ಖಾಸಗಿ ಬಸ್ ಪಲ್ಟಿ: ಓರ್ವ ಸಾವು

KannadaprabhaNewsNetwork |  
Published : Aug 11, 2026, 02:00 AM IST
ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವುದು. | Kannada Prabha

ಸಾರಾಂಶ

ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವುದು.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, 33 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೋಮವಾರ ಸಂಭವಿಸಿದೆ.

ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಬಾವರಸಿಂಗ್ ರಾಜೇಂದ್ರಸಿಂಗ್ (18) ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬಸ್ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬಸ್‌ನಲ್ಲಿ ಒಟ್ಟು 34 ಜನರು ಪ್ರಯಾಣಿಸುತ್ತಿದ್ದರು, ಅಪಘಾತದಲ್ಲಿ 33 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ಹಾಗೂ ತುರ್ತು ಸೇವೆಗಳ ಮೂಲಕ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದರು.

ಈ ಕುರಿತು ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘ ಹೋರಾಟಕ್ಕೆ ಇಲ್ಲ ನ್ಯಾಯ: ಮಂತ್ರಿ, ಶಾಸಕರನ್ನು ನಿಲ್ಲಿಸಿ ಕೇಳೋಣ
ಗುತ್ತಿಗೆ ಕಾರ್ಮಿಕರ ಸೇವೆ ಕಾಯಂ ಮಾಡಿ: ಸಿಐಟಿಯು ಪ್ರತಿಭಟನೆ