ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಂಟೇನರ್‌ಗೆ ಖಾಸಗಿ ಬಸ್ ಡಿಕ್ಕಿ

KannadaprabhaNewsNetwork |  
Published : Jul 06, 2026, 01:15 AM IST
5ಕೆಆರ್ ಎಂಎನ್ 5.ಜೆಪಿಜಿಅಪಘಾತದಲ್ಲಿ ಖಾಸಗಿ ಬಸ್ ಜಖಂಗೊಂಡು ಕಂಟೇನರ್ ಪಲ್ಟಿಯಾಗಿರುವುದು. | Kannada Prabha

ಸಾರಾಂಶ

ರಾಮನಗರ: ಖಾಸಗಿ ಬಸ್ಸೊಂದು ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಟೇನರ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ತಾಲೂಕಿನ ವಡ್ಡರದೊಡ್ಡಿ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ

ರಾಮನಗರ: ಖಾಸಗಿ ಬಸ್ಸೊಂದು ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಟೇನರ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ತಾಲೂಕಿನ ವಡ್ಡರದೊಡ್ಡಿ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಕಂಟೇನರ್ ಅನ್ನು ಓವರ್ ಟೇಕ್ ಮಾಡಲು ಬಸ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಂಟೇನರ್‌ನ ಹಿಂಭಾಗಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಗೆ ಕಂಟೇನರ್ ಉರುಳಿ ಬಿದ್ದಿದ್ದು, ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

5ಕೆಆರ್ ಎಂಎನ್ 5.ಜೆಪಿಜಿ

ಅಪಘಾತದಲ್ಲಿ ಖಾಸಗಿ ಬಸ್ ಜಖಂಗೊಂಡು ಕಂಟೇನರ್ ಪಲ್ಟಿಯಾಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಹಕ ಸ್ನೇಹಿ ಸೇವೆಯೇ ಎಸ್‌ಬಿಐ ಯಶಸ್ಸಿನ ಗುಟ್ಟು
ಶೂ ವಿತರಣೆಯ ಹೊಣೆ ಶಿಕ್ಷಕರಿಗೆ ಬೇಡ