ಖಾಸಗಿ ಶಿಕ್ಷಣ ಸಂಸ್ಥೆಗಳು ಹಗಲು ದರೋಡೆಯ ನಿಲ್ಲಿಸಲಿ: ನಜೀರ್ ಅಹಮ್ಮದ್

KannadaprabhaNewsNetwork |  
Published : May 14, 2024, 01:01 AM IST
ಪೊಟೊ: 13ಎಸ್‌ಎಂಜಿಕೆಪಿ04ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಢಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮ್ಮದ್ ಮಾತನಾಡಿದರು. | Kannada Prabha

ಸಾರಾಂಶ

ಜೂನ್ ತಿಂಗಳು ಬಂತೆಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ ಹೆಚ್ಚಾಗುತ್ತಿದೆ. ಎಷ್ಟೋ ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಪ್ರವೇಶಗಳೇ ಮುಗಿದು ಹೋಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಮಿತಿ ಮೀರಿ ಡೊನೇಷನ್ ಪಡೆಯುತ್ತಾರೆ. ಪ್ರತಿ ವರ್ಷ ಶೇ.15ರಷ್ಟು ಶುಲ್ಕವನ್ನು ಹೆಚ್ಚಿಸುತ್ತಾರೆ. ಸರ್ಕಾರಗಳು ಕೂಡ ಇದಕ್ಕೆ ಒಪ್ಪಿ ಬಿಡುತ್ತವೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ಹಗಲು ದರೋಡೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮ್ಮದ್ ಆಗ್ರಹಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜೂನ್ ತಿಂಗಳು ಬಂತೆಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿ ಹೆಚ್ಚಾಗುತ್ತಿದೆ. ಎಷ್ಟೋ ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಪ್ರವೇಶಗಳೇ ಮುಗಿದು ಹೋಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಮಿತಿ ಮೀರಿ ಡೊನೇಷನ್ ಪಡೆಯುತ್ತಾರೆ. ಪ್ರತಿ ವರ್ಷ ಶೇ.15ರಷ್ಟು ಶುಲ್ಕವನ್ನು ಹೆಚ್ಚಿಸುತ್ತಾರೆ. ಸರ್ಕಾರಗಳು ಕೂಡ ಇದಕ್ಕೆ ಒಪ್ಪಿ ಬಿಡುತ್ತವೆ ಎಂದರು.

ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದ್ದರೂ ಕೂಡ ಅದು ಏನು ಕೆಲಸ ಮಾಡುತ್ತಿಲ್ಲ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಖಾಸಗಿ ಶಾಲೆಗಳ ಡೊನೇಷನ್ ಹಾವಳಿಯನ್ನು ತಪ್ಪಿಸಿದೆ. ಅದೇ ರೀತಿ ಎಲ್ಲಾ ರಾಜ್ಯಗಳು ಖಾಸಗಿ ಶಾಲೆಗಳ ಶುಲ್ಕ ನಿಗದಿ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶುಲ್ಕ ನಿಗದಿ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಸಮರ್ಪಕ ವಾದವನ್ನು ಮಂಡಿಸಿಲ್ಲ. ಪೋಷಕರು ಕೂಡ ಖಾಸಗಿ ಶಾಲೆಗಳ ಮೋಹಕ್ಕೆ ಒಳಗಾಗಿ ಡೊನೇಷನ್ ವಿರುದ್ಧ ಮಾತಾಡುವುದಿಲ್ಲ ಎಂದರು. ಹಾಗಾಗಿ ಸರ್ಕಾರವೇ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಹೋರಾಟವನ್ನು ರಾಜ್ಯಾದಾದ್ಯಂತ ಆರಂಭಿಸಲಾಗುವುದು ಎಂದರು.ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಹರೀಶ್, ಯೂಸಫ್, ಸಾಹೀರ್, ಗೌಸ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!