ಹೊಸಕೋಟೆ: ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೇಗಳ ಸಹಭಾಗಿತ್ವ ಅಗತ್ಯ ಎಂದು ಸಚಿವ ಕೆಜಿಎ ಜಾರ್ಜ್ ತಿಳಿಸಿದರು.
ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, 3.5 ಕೋಟಿ ವೆಚ್ಚದಲ್ಲಿ ಶಾಲೆ ನಿರ್ಮಾಣ ಮಾಡಲಾಗುತ್ತಿದ್ದು ೬ ತಿಂಗಳಲ್ಕಿ ಶಾಲೆ ನಿರ್ಮಿಸಿ ರಾಜ್ಯದಲ್ಲಿಯೇ ಮಾದರಿಯಾಗುವಂತೆ ಮಾಡಬೇಕು. ವೋಲ್ವೋ ಸಂಸ್ಥೆ ತನ್ನ ಸಿಎಸ್‌ಆರ್ ಅನುದಾನಡಿಯಲ್ಲಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಿದೆ. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರದ ಜೊತೆಗೆ ಕೈ ಜೋಡಿಸಿ ತಾಲೂಕಿಗೆ ಮತ್ತಷ್ಟು ನೆರವು ನೀಡುತ್ತಿರುವುದು ಪ್ರಶಂಶನೀಯ ಎಂದರು.
ಈ ಸಂದರ್ಭದಲ್ಲಿ ವೋಲ್ವೋ ಕಂಪನಿ ಮುಖ್ಯಸ್ಥ ಜಿವಿ ರಾವ್, ಬಾಲಾಜಿ, ಬೆಸ್ಕಾಂ ಎಂಡಿ ಶಿವಶಂಕರ್, ಗ್ರಾಪಂ ಅಧ್ಯಕ್ಷೆ ಪ್ರಿಯಾಂಕಾರಮೇಶ್, ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಾಜಶೇಖರ್ ಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೋಡಿಹಳ್ಳಿ ಸುರೇಶ್, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಸುಬ್ಬರಾಜು ಇತರರು ಹಾಜರಿದ್ದರು.ಫೋಟೋ : 30 ಹೆಚ್‌ಎಸ್‌ಕೆ 2
ಹೊಸಕೋಟೆ ತಾಲೂಕಿನ ತಾವರೆಕೆರೆ ಸರ್ಕಾರಿ ಶಾಲೆ ಆವರಣದಲ್ಲಿ ನೂತನ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮವನ್ನು ಸಚಿವ ಕೆಜೆ ಜಾರ್ಜ್ ಉದ್ಘಾಟಿಸಿದರು.