ಕನ್ನಡಪ್ರಭ ವಾರ್ತೆ ಚಾಮರಾಜನಗರ
ಖಾಸಗಿ ಶಾಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲೇ ಶಿಕ್ಷಕರ ನೇಮಕವಾಗಿರುತ್ತದೆ. ತರಬೇತಿಯನ್ನು ಸಹ ಶಿಕ್ಷಕರಿಗೆ ಸಂಸ್ಥೆಗಳಿಂದ ನೀಡಲಾಗಿರುತ್ತದೆ ಇಂಥ ಸಂದರ್ಭದಲ್ಲಿ ಖಾಸಗಿ ಶಾಲೆಯ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕವಾಗಿ ಮಧ್ಯದಲ್ಲಿ ಖಾಸಗಿ ಶಾಲೆ ತ್ಯಜಿಸಿ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿರುವುದರಿಂದ ಶಿಕ್ಷಕರ ಕೊರತೆ ಉಂಟಾಗಿ ನಿರಂತರವಾಗಿ ನೂತನ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಸಬೇಕಾಗುವ ಸಮಸ್ಯೆ ಉಂಟಾಗುತ್ತಿದೆ ಎಂದರು.
ಶಿಕ್ಷಕರ ಕೊರತೆ ಅಥವಾ ಬದಲಾವಣೆಯಿಂದ ಪೋಷಕರ ಮತ್ತು ವಿದ್ಯಾರ್ಥಿಗಳ ನಂಬಿಕೆಗೆ ಧಕ್ಕೆ ಉಂಟಾಗುತ್ತಿದೆ. ಅಲ್ಲದೇ ಸಂಸ್ಥೆಗಳ ಆರ್ಥಿಕ ನಷ್ಟವಾಗುತ್ತಿದೆ. ಆದ್ದರಿಂದ ಕೆಲವು ನಿಯಮಗಳನ್ನು ಜಿಲ್ಲಾ ಮಟ್ಟದಲ್ಲಿ ಅನುಸರಿಸುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.ಈ ನಿಟ್ಟಿನಲ್ಲಿ ಖಾಸಗಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಅತಿಥಿ ಶಿಕ್ಷಕರಾಗಿ ಸರ್ಕಾರಿ ನೇಮಕಾತಿ ನೀಡುವುದಕ್ಕೆ ಮೊದಲು ಅವರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಿಂದ ಅನುಮತಿ ಪತ್ರ ಕಡ್ಡಾಯವಾಗಿ ಪಡೆಯಬೇಕೆಂಬ ನಿಬಂಧನೆ ವಿಧಿಸಬೇಕು. ಖಾಸಗಿ ಶಾಲೆಗಳಲ್ಲಿರುವ ಅತಿಥಿ ಶಿಕ್ಷಕರ ಡೇಟಾಬೇಸ್ ಸಂಗ್ರಹಿಸಿ ಅವರ ಸ್ಥಿತಿಗತಿಯ ಬಗ್ಗೆ ಗಮನಹರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಉಮೇಶ್, ಖಜಾಂಚಿ ಆಶಾ, ಪದಾಧಿಕಾರಿಗಳಾದ ವಾಸುದೇವ, ಮಂಜುನಾಥ್, ಮೋಹನ್ ಇದ್ದರು.