ಕನ್ನಡಪ್ರಭ ವಾರ್ತೆ ವಿರಾಜಪೇಟೆ
ಕೇರಳ ನೋಂದಣಿ ಹೊಂದಿರುವ ಖಾಸಗಿ ಬಸ್ ಪ್ರವಾಸಿ ಬಸ್ ಆಗಿದ್ದು ವಿರಾಜಪೇಟೆಯಲ್ಲಿ ಸೋಮವಾರ ಮುಂಜಾನೆ ಪ್ರವಾಸಿಗರನ್ನು ಇಳಿಸಿ, ವಾಪಸು ಕೇರಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಬಸ್ ನಲ್ಲಿ ಚಾಲಕ ಹಾಗೂ ನಿರ್ವಾಹಕರು ಮಾತ್ರ ಇದ್ದಿದ್ದು ಈರ್ವರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಗೆ ಬೆಂಕಿ ಹಿಡಿದರ ಪರಿಣಾಮ ಮಾಕುಟ್ಟ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್ ಆಗಿತ್ತು.ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಬಸ್ ಸಂಪೂರ್ಣವಾಗಿ ಭಸ್ಮವಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
-------------------------------------------------------ಕಾರು ಅಪಘಾತ: ವ್ಯಕ್ತಿ ಗಂಭೀರ
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಸಂಭವಿಸಿದೆ. ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದ ವೇಣುಗೋಪಾಲ್ ಎಂಬುವರಿಗೆ ಸೇರಿದ ಕಾರು, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು ಮಡಿಕೇರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.