ರವೀಂದ್ರ ಕಾಂಬಳೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗ ವ್ಯಾಪ್ತಿಯ ಹುಕ್ಕೇರಿ ಹೊಸ ಬಸ್ ನಿಲ್ದಾಣ ಬಳಿ ಖಾಸಗಿ ವಾಹನಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಪ್ರತಿದಿನ ಲಕ್ಷಾಂತರ ಆದಾಯ ನಷ್ಟವಾಗುವುದರ ಜೊತೆಗೆ ಬಸ್ ನಿಲ್ದಾಣದ ಸುತ್ತ-ಮುತ್ತ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಬಸ್ ನಿಲ್ದಾಣದ ಎದುರು ಪ್ರತಿದಿನ ಅನೇಕ ಕ್ರೂಷರ್ ಸೇರಿದಂತೆ ಖಾಸಗಿ ಸೀಟ್ ಸರ್ವಿಸ್ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ನಿಯಮಾನುಸಾರ ಬಸ್ ನಿಲ್ದಾಣದ ಸುತ್ತಮುತ್ತ ನಿಗದಿತ ಅಂತರ ಕಾಯ್ದುಕೊಳ್ಳಬೇಕಾದ ಖಾಸಗಿ ವಾಹನಗಳು, ಬಸ್ ನಿಲ್ದಾಣದ ಮುಂಭಾಗದಲ್ಲೇ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಖಾಸಗಿ ವಾಹನಗಳ ಈ ಕಾರ್ಯಾಚರಣೆಯಿಂದ ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಪ್ರಯಾಣಿಕರ ಕೊರತೆ ಎದುರಾಗಿದೆ. ನಿಗಮಕ್ಕೆ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇಷ್ಟೆಲ್ಲ ಸಮಸ್ಯೆ ಎದುರಾದರೂ ಸಾರಿಗೆ ಅಧಿಕಾರಿಗಳು ಯಾವುದೇ ಕಠಿಣ ಕ್ರಮ ಕೈಗೊಳ್ಳದೇ ಮೌನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇನ್ನು ಬಸ್ ನಿಲ್ದಾಣದ ಎದುರು ಖಾಸಗಿ ಸೀಟ್ ಸರ್ವಿಸ್ ವಾಹನಗಳು ಸಾಲುಗಟ್ಟಿ ನಿಲ್ಲುವುದರಿಂದ ಟ್ರಾಫಿಕ್ ಕಿರಿಕಿರಿ, ವಾಹನ ಸಂಚಾರಕ್ಕೆ ಅಡಚಣೆ ಹಾಗೂ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ನಿಯಮ ಉಲ್ಲಂಘನೆಯಾಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸರು ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಕ್ಕೇರಿಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ಬಸ್ ನಿಲ್ದಾಣದ ಎದುರಿಗೆ ಖಾಸಗಿ ವಾಹನಗಳ ದರ್ಬಾರ ದಿನೇ ದಿನೇ ಹೆಚ್ಚುತ್ತಿದೆ. ಖಾಸಗಿ ಸೀಟ್ ಸರ್ವಿಸ್ ವಾಹನಗಳಿಂದ ಇಷ್ಟೆಲ್ಲ ಟ್ರಾಫಿಕ್ ಕಿರಿಕಿರಿಯಾದರೂ ಪೊಲೀಸರು ಜಾಣ ಕುರುಡರಾಗಿರುವುದು ಅನುಮಾನಕ್ಕೆ ಎಡೆಮಾಡಿದೆ. ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ವಾಹನದಾರರು ಸಾರಿಗೆ ಸಂಸ್ಥೆಯ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾರೆ ಎಂಬ ಗಂಭೀರ ದೂರುಗಳಿವೆ.
ಕೋಟ್ ---
-ಎಂ.ಆರ್.ಮುಂಜಿ, ವಿಭಾಗೀಯ ಹಿರಿಯ ನಿಯಂತ್ರಣಾಧಿಕಾರಿಗಳು ಕೆಎಸ್‌ಆರ್‌ಟಿಸಿ ಚಿಕ್ಕೋಡಿ