ಕನ್ನಡಪ್ರಭ ವಾರ್ತೆ ಮೂಲ್ಕಿ
ಸಂಘದ ಅಭಿವೃದ್ಧಿಗೆ ಗ್ರಾಹಕರು, ಸದಸ್ಯರು ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು, ಲಾಭಾಂಶದಲ್ಲಿ ಶೇ.8 ಡಿವಿಡೆಂಟ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರದ ಅಗತ್ಯವಿದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಹೇಳಿದರು.ಹಳೆಯಂಗಡಿಯ ಹರಿ ಓಂ ಸಭಾಂಗಣದಲ್ಲಿ ಜರುಗಿದ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2024- 25ನೇ ಸಾಲಿನ ವಾರ್ಷಿಕ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ರಾಜ್ಯ ಹಿಂದುಳಿದ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಅಂತಾರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಸುಷ್ಮಾ ತಾರಾನಾಥ್, ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ಶೃತಿ ಅವರನ್ನು ಗೌರವಿಸಲಾಯಿತು. ಸೊಸೈಟಿ ಸಾಧನೆಗೆ ಕಾರಣಕರ್ತರಾದ ಮಹಿಳಾ ಸ್ವಸಹಾಯ ಗುಂಪುಗಳನ್ನು ಅಭಿನಂದಿಸಲಾಯಿತು. ಸಂಘದ ಸದಸ್ಯರಿಗೆ ಶೇ.8 ಡಿವಿಡೆಂಟ್ ವಿತರಿಸಲಾಯಿತು.ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪಂಜ, ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉಮಾನಾಥ್ ಜೆ. ಶೆಟ್ಟಿಗಾರ್, ಜೈಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನರಾಜ್ ಕೋಟ್ಯಾನ್, ಮಿರ್ಜಾ ಅಹ್ಮದ್, ಶೆರಿಲ್ ಆಯೋನ ಐಮನ್, ಹರೀಶ್ ಎನ್. ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್, ವಿಜಯಕುಮಾರ್ ಸನಿಲ್, ತನುಜಾ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಕಿನ್ನಿಗೋಳಿ ಶಾಖಾ ಪ್ರಬಂಧಕ ಮೋಹನ್ ದಾಸ್ ಮತ್ತು ಹಳೆಯಂಗಡಿ ಪ್ರಜ್ಞಶ್ರೀ ಅಭಿನಂದನಾ ಕಾರ್ಯಕ್ರಮ ನಡೆಸಿಕೊಟ್ಟರು. ಪಡುಬಿದ್ರೆ ಶಾಖಾ ಪ್ರಬಂಧಕ ಅಂಜಲಿ ಉಳ್ಳಾಲ್ ಎಸ್., ಉತ್ತಮ ಸ್ವಸಹಾಯ ಗುಂಪುಗಳ ಗೌರವ ಕಾರ್ಯಕ್ರಮ ನಡೆಸಿದರು.ಸಾಲ ವಿಭಾಗದ ಪ್ರಬಂಧಕರಾದ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು.